ನವದೆಹಲಿ: ಅಯೋಧ್ಯೆಯ ರಾಮಮಂದಿರ (Ayodhya Ram Mandir) ಸೇರಿದಂತೆ ಹಿಂದೂ ದೇವಾಲಯಗಳನ್ನು (Hindu Temples) ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುವುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (Sikhs for Justice) ಸಂಘಟನೆಯ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಬೆದರಿಕೆ ಹಾಕಿದ್ದಾನೆ.
ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯು ಬಿಡುಗಡೆ ಮಾಡಿದ ವೀಡಿಯೊದಲ್ಲಿ ಮಾತನಾಡಿರುವ ಪನ್ನುನ್, ನವೆಂಬರ್ 16 ಮತ್ತು 17 ರಂದು ದಾಳಿಯ ಬಗ್ಗೆ ಎಚ್ಚರಿಸಿದ್ದಾರೆ. ಇದು ಕೆನಡಾದ ಬ್ರಾಂಪ್ಟನ್‌ನಲ್ಲಿ ರೆಕಾರ್ಡ್ ಮಾಡಲಾದ ವೀಡಿಯೊ ಎನ್ನಲಾಗಿದ್ದು, ಹಿಂದೂ ಪೂಜಾ ಸ್ಥಳಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಗುರಿಯನ್ನು ಹೊಂದಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಎಪಿಎಂಸಿ ಹೊರಗೆ ಯುವಕನ ಶವ ಪತ್ತೆ – ಅನೈತಿಕ ಸಂಬಂಧಕ್ಕೆ ಬಲಿಯಾದ ಶಂಕೆ!
ಹಿಂಸಾತ್ಮಕ ಹಿಂದುತ್ವ ಸಿದ್ಧಾಂತದ ಜನ್ಮಸ್ಥಳವಾದ ಅಯೋಧ್ಯೆಯ ಅಡಿಪಾಯವನ್ನು ನಾವು ಅಲುಗಾಡಿಸುತ್ತೇವೆ. ಹಿಂದೂ ದೇವಾಲಯಗಳ ಮೇಲಿನ ಖಲಿಸ್ತಾನಿ ದಾಳಿಯಿಂದ ದೂರವಿರುವಂತೆ ಕೆನಡಾದಲ್ಲಿರುವ ಭಾರತೀಯರಿಗೆ ಪನ್ನುನ್ ಎಚ್ಚರಿಕೆ ನೀಡಿದ್ದಾನೆ. ಕಳೆದ ತಿಂಗಳು, ನವೆಂಬರ್ 1 ಮತ್ತು 19ರ ನಡುವೆ ಏರ್ ಇಂಡಿಯಾ ವಿಮಾನಗಳಲ್ಲಿ ಹಾರಾಟ ಮಾಡದಂತೆ ಪನ್ನುನ್ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದ. ಇದಕ್ಕೂ ಮೊದಲು ಭಾರತೀಯ ರಾಜತಾಂತ್ರಿಕರ ವಿರುದ್ಧ ಹಿಂಸಾಚಾರಕ್ಕೆ ಕರೆ ನೀಡಿದ್ದ. ಇದನ್ನೂ ಓದಿ: ಮಹಿಳೆಯರಿಗೆ ಫ್ರೀ ಬಸ್ ಕೊಟ್ಟರು, ಪಾಪ ಪುರುಷರಿಗೆ ಏನ್ ಮಾಡಿದ್ರು? – ಸರ್ಕಾರಕ್ಕೆ ನಟಿ ತಾರಾ ಪ್ರಶ್ನೆ
ಪನ್ನುನ್ ಕೋಮು ಸೌಹಾರ್ದತೆಯನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಹಲವಾರು ವಿವಾದತ್ಮಾಕ ಹೇಳಿಕೆಗಳನ್ನು ನೀಡಿದ್ದಾನೆ. ಜುಲೈ 2020ರಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA) ಅಡಿಯಲ್ಲಿ ಪನ್ನುನ್‌ನನ್ನು ಭಯೋತ್ಪಾದಕ ಎಂದು ಹೆಸರಿಸಲಾಯಿತು. ಭಾರತ ಸರ್ಕಾರವು ಆತನ ಬಂಧನಕ್ಕೆ ಅನೇಕ ವಾರಂಟ್‌ಗಳನ್ನು ಸಹ ಹೊರಡಿಸಿದೆ. ಆದಾಗ್ಯೂ ಪನ್ನುನ್ ಅಮೆರಿಕ ಮತ್ತು ಕೆನಡಾದಿಂದ ಕಾರ್ಯ ನಿರ್ವಹಿಸುವುದನ್ನು ಮುಂದುವರೆಸಿದ್ದಾನೆ. ಇದನ್ನೂ ಓದಿ: ಐತಿಹಾಸಿಕ ಸೋಮೇಶ್ವರ ದೇವಸ್ಥಾನ ವಕ್ಫ್‌ಗೆ ಪರಭಾರೆ ಆರೋಪ; ವಕ್ಫ್ ಬೋರ್ಡ್, ಸರ್ಕಾರದ ವಿರುದ್ಧ ಪ್ರತಿಭಟನೆ