ನವದೆಹಲಿ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (NHRC) ಅಧ್ಯಕ್ಷರು ಮತ್ತು ಸದಸ್ಯರ ಆಯ್ಕೆ ಸಂಬಂಧ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಸರ್ಕಾರ ಅನುಸರಿಸಿದ ಪ್ರಕ್ರಿಯೆಯು ʻದೋಷಪೂರಿತʼ ಮತ್ತು ʻಪೂರ್ವನಿರ್ಧರಿತʼ ಕಸರತ್ತು. ಪರಸ್ಪರ ಸಮಾಲೋಚನೆ ಮತ್ತು ಒಮ್ಮತವನ್ನು ಕಡೆಗಣಿಸಲಾಗಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಆರೋಪಿಸಿದ್ದಾರೆ.
Advertisement
ರಾಹುಲ್ ಮತ್ತು ಖರ್ಗೆ ಅವರು ಎನ್‌ಎಚ್‌ಆರ್‌ಸಿ ಅಧ್ಯಕ್ಷ ಸ್ಥಾನಕ್ಕೆ ನ್ಯಾಯಮೂರ್ತಿ ರೋಹಿಂಟನ್ ಫಾಲಿ ನಾರಿಮನ್ ಮತ್ತು ನ್ಯಾಯಮೂರ್ತಿ ಕುಟ್ಟಿಯಿಲ್ ಮ್ಯಾಥ್ಯೂ ಜೋಸೆಫ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಆದರೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಅವರನ್ನು ಮಾನವ ಹಕ್ಕುಗಳ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಿದೆ. ಎನ್‌ಎಚ್‌ಆರ್‌ಸಿ ಅಧ್ಯಕ್ಷರನ್ನು ನೇಮಿಸುವಾಗ ಪ್ರದೇಶ, ಧರ್ಮ ಮತ್ತು ಜಾತಿಯ ಸಮತೋಲನವನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ಭಿನ್ನಾಭಿಪ್ರಾಯ ಟಿಪ್ಪಣಿಯಲ್ಲಿ ತಿಳಿಸಿದ್ದಾರೆ.
Advertisement
Advertisement
ನಿವೃತ್ತ ನ್ಯಾಯಮೂರ್ತಿ ರಾಮಸುಬ್ರಮಣಿಯನ್ ಅವರ ನೇಮಕಕ್ಕೂ ಮುನ್ನ, ನಿವೃತ್ತ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರು ಜೂನ್ 1 ರಂದು ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದಾಗಿನಿಂದ NHRC ಅಧ್ಯಕ್ಷರ ಹುದ್ದೆಯು ಖಾಲಿಯಾಗಿತ್ತು. ಮಿಶ್ರಾ ಅವರ ನಂತರ ವಿಜಯ ಭಾರತಿ ಸಯಾನಿ ಅವರು ಮಾನವ ಹಕ್ಕುಗಳ ಸಮಿತಿಯ ಹಂಗಾಮಿ ಅಧ್ಯಕ್ಷರಾದರು.
Advertisement
ಡಿಸೆಂಬರ್ 18 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತಾಧಿಕಾರ ಸಮಿತಿಯು ಎನ್‌ಎಚ್‌ಆರ್‌ಸಿಯ ಮುಂದಿನ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಭೆ ನಡೆಸಿತು. ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಸಭೆಯಲ್ಲಿ ಭಾಗಿಯಾಗಿ ಹಲವು ಹೆಸರು ಹೆಸರು ಪ್ರಸ್ತಾಪಿಸಿದ್ದರು. ಆದರೆ ವಿರೋಧ ಪಕ್ಷದ ನಾಯಕರು ನೀಡಿದ ಹೆಸರು ಪ್ರಸ್ತಾಪಿಸದ ಸರ್ಕಾರ ನಿವೃತ್ತ ನ್ಯಾಯಮೂರ್ತಿ ರಾಮಸುಬ್ರಮಣಿಯನ್ ಹೆಸರು ಅಂತಿಮಗೊಳಿಸಿದೆ.
ಎನ್‌ಎಚ್‌ಆರ್‌ಸಿ ಸೋಮವಾರ ಟ್ವೀಟ್ ಮಾಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ನಿವೃತ್ತ ನ್ಯಾಯಮೂರ್ತಿ ವಿ ರಾಮಸುಬ್ರಮಣಿಯನ್ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡುತ್ತಾರೆ ಮತ್ತು ಪ್ರಿಯಾಂಕ್ ಕಾನೂಂಗೊ ಮತ್ತು ಡಾ. ಬಿದ್ಯುತ್ ರಂಜನ್ ಸಾರಂಗಿ ಅವರನ್ನು ಸದಸ್ಯರಾಗಿ ನೇಮಕ ಮಾಡಿದ್ದಾರೆ ಎಂದು ತಿಳಿಸಿದೆ.