ನವದೆಹಲಿ: ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಇಂದು ನಡೆಸಿದ ಕೊರೊನಾ ಸೋಂಕಿನ ಪರೀಕ್ಷೆಯಲ್ಲಿ ಧನಾತ್ಮಕ ಫಲಿತಾಂಶ ಬಂದಿದೆ. ಈ ಹಿನ್ನೆಲೆಯಲ್ಲಿ ಅವರು ಸೋಮವಾರ ದೆಹಲಿಯಲ್ಲಿ ನಡೆಯಲಿರುವ 75ನೇ ಸ್ವಾತಂತ್ರ‍್ಯ ಮಹೋತ್ಸವದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಗುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಮತಾಂತರ ಮಾಡಿದ್ರೆ 10 ವರ್ಷ ಜೈಲು – ಹಿಮಾಚಲ ಪ್ರದೇಶದಲ್ಲಿ ಸಾಮೂಹಿಕ ಮತಾಂತರ ನಿಷೇಧ
Advertisement
Kharge tests positive for COVID-19; to skip I-Day celebrations in Delhi
Read @ANI Story | https://t.co/TRXnh1Yt99
#Kharge #COVID19 #IndependenceDay2022 pic.twitter.com/PiVFf85seo
— ANI Digital (@ani_digital) August 13, 2022
Advertisement
ಭಾರತದ 75ನೇ ವರ್ಷದ ಸ್ವಾತಂತ್ರ‍್ಯೋತ್ಸವವು ನಮ್ಮಲ್ಲಿ ಪ್ರತಿಯೊಬ್ಬರಿಗೂ ಐತಿಹಾಸಿಕ ಸಂದರ್ಭ ಹಾಗೂ ಹೆಮ್ಮೆಯ ಕ್ಷಣವಾಗಿದೆ. ಆದರೆ ನಾನು ಆಗಸ್ಟ್ 15ರ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲು ಉತ್ಸುಕನಾಗಿದ್ದೆ. ಆದರೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸಮಾರಂಭದಲ್ಲಿ ಪಾಲ್ಗೊಳ್ಳುವ ಸ್ಥಿತಿಯಲ್ಲಿ ನಾನಿಲ್ಲ ಎಂದು ಪತ್ರದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ರಾಜಸ್ಥಾನ ಬೆಡಗಿ ಕಿರಣ್ ಯೋಗೇಶ್ವರ್ ಔಟ್
Advertisement
Advertisement
ನಾನು ದೈಹಿಕವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಿಲ್ಲ. ಆದರೆ ಇಡೀ ರಾಷ್ಟçದೊಂದಿಗೆ ಸ್ವಾತಂತ್ರ‍್ಯ ಸಂಭ್ರಮದಲ್ಲಿ ಸೇರಿಕೊಳ್ಳುತ್ತೇನೆ. ಈ ಶುಭ ಸಂದರ್ಭದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರುತ್ತೇನೆ ಎಂದು ಅವರು ಹೇಳಿದ್ದಾರೆ.