Connect with us

Latest

ಕೈ ಬಿಟ್ಟು ಕಮಲ ಮುಡಿಯಲು ಖುಷ್ಬೂ ರೆಡಿ

Published

on

ಚೆನ್ನೈ: ನಟಿ, ಕಾಂಗ್ರೆಸ್ ವಕ್ತಾರೆ ಖುಷ್ಬೂ ಸುಂದರ್ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಇಂದು ಸಂಜೆ ಚೆನ್ನೈನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಖುಷ್ಬೂ ಬಿಜೆಪಿ ಸೇರಲಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಪದವಿಯಿಂದ ಖುಷ್ಬೂ ಅವರನ್ನ ವಜಾಗೊಳಿಸಿ ಆದೇಶಿಸಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಖುಷ್ಬೂ ಸುಂದರ್, ಪಕ್ಷದ ಕೆಲವು ವಿಷಯಗಳ ಉನ್ನತ ಮಟ್ಟದಲ್ಲಿಯೇ ಉಳಿದುಕೊಂಡಿವೆ. ಆ ವಿಷಯ ಅಥವಾ ವಿಚಾರ ತಳಮಟ್ಟದಲ್ಲಿರುವ ಕಾರ್ಯಕರ್ತರಿಗೆ ತಲುಪುತ್ತಿಲ್ಲ. ಉನ್ನತ ಸ್ಥಾನದಲ್ಲಿದ್ದವರಿಂದ ಕೇವಲ ಆದೇಶಗಳು ಬರುತ್ತೇವೆ ಎಂದು ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ.

2014ರಲ್ಲಿ ಡಿಎಂಕೆ ತೊರೆದು ಖುಷ್ಬೂ ಸುಂದರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ತದನಂತರ ತಮಿಳುನಾಡಿ ರಾಜಕೀಯದಲ್ಲಿ ಸಕ್ರಿಯವಾಗಿದ್ದರು. ಪಕ್ಷದ ವಕ್ತಾರೆಯಾಗಿ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜಕೀಯ ಅಂಗಳದಲ್ಲಿ ಚಿರಪರಿಚಿತರಾಗಿದ್ದರು.

ಕನ್ನಡ, ಹಿಂದಿ, ತಮಿಳು ಸೇರಿದಂತೆ 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಖುಷ್ಬೂ ಎಲ್ಲರಿಗೂ ಚಿರಪರಿಚಿತ. ತಮಿಳುನಾಡಿನಲ್ಲಿ ಬಾವುಟ ಹಾರಿಸಲು ಬಿಜೆಪಿ ಶತಾಗತಯ ಪ್ರಯತ್ನ ಪಡುತ್ತಿದೆ. ಈ ಬೆನ್ನಲ್ಲೇ ಖುಷ್ಬೂ ಸೇರ್ಪಡೆ ಬಿಜೆಪಿಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂದು ವಿಶ್ಲೇಷಣೆ ಮಾಡಲಾಗ್ತಿದೆ. ಮುಂದಿನ ವರ್ಷ ತಮಿಳುನಾಡಿನ ವಿಧಾನಸಭಾ ಚುನಾವಣೆ ಹಿನ್ನೆಲೆ ಖುಷ್ಬೂ ಬಿಜೆಪಿ ಸೇರ್ಪಡೆ ಹೆಚ್ಚು ಮಹತ್ವ ಪಡೆದುಕೊಂಡಿದೆ.

Click to comment

Leave a Reply

Your email address will not be published. Required fields are marked *