ಚಿಕ್ಕಬಳ್ಳಾಪುರ: ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಲ್ಲಿ ಕೋವಿಡ್ (Covid-19) ಗುಣ ಲಕ್ಷಣಗಳಾದ ಜ್ವರ, ನೆಗಡಿ, ಕೆಮ್ಮು ಕಂಡುಬಂದರೆ ಸೀದಾ ವಿಮಾನ (Flight) ನಿಲ್ದಾಣದಿಂದ ಆಸ್ಪತ್ರೆಗೆ (Hospital) ಕಳುಹಿಸಲಾಗುವುದು, ಈ ಹೊಸ ಮಾರ್ಗಸೂಚಿ ನಿನ್ನೆಯಿಂದಲೇ ಜಾರಿಯಾಗಿದೆ ಎಂದು ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲಾಧಿಕಾರಿ ಆರ್. ಲತಾ ತಿಳಿಸಿದರು.
Advertisement
ಕೋವಿಡ್ ಕಡಿವಾಣ ಸಂಬಂಧ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಹೊಸ ನಿಯಮ ಮಾರ್ಗಸೂಚಿ ಜಾರಿ ಮಾಡಲಾಗಿದೆ. RTPCR ಟೆಸ್ಟ್‌ಗೆ ಗಂಟಲು ದ್ರವ ಸಂಗ್ರಹ ಮಾಡಿಕೊಂಡು ವರದಿ ಬರೋಕು ಮುನ್ನವೇ ಅವರನ್ನು ನೇರವಾಗಿ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಕಳುಹಿಸಲಾಗುವುದು. ಪ್ರಯಾಣಿಕರು ಖಾಸಗಿ ಆಸ್ಪತ್ರೆಗೆ ಹೋಗಲು ಇಚ್ಚೆಪಟ್ಟಲ್ಲಿ ಅವರು ಸ್ವಂತ ಹಣ ವ್ಯಯಿಸಿ ಹೋಗಬಹುದು ಅದಕ್ಕೂ ಅವಕಾಶವಿದೆ ಎಂದರು. ಇದನ್ನೂ ಓದಿ: ಆಸ್ಪತ್ರೆ ಸೇರಿರೋ ಪ್ರಧಾನಿ ತಾಯಿ – ನಿಮ್ಮೊಂದಿಗೆ ನಾನಿದ್ದೇನೆ ಎಂದು ಮೋದಿಗೆ ರಾಹುಲ್ ಗಾಂಧಿ ಅಭಯ
Advertisement
Advertisement
ಈ ಸಂಬಂಧ 8 ಮಂದಿ ಆರೋಗ್ಯ ನಿರೀಕ್ಷಕರು ಸೇರಿದಂತೆ ಹೆಚ್ಚುವರಿ ಸಿಬ್ಬಂದಿಯನ್ನು ಏರ್‌ಪೋರ್ಟ್‌ನಲ್ಲಿ ನಿಯೋಜನೆ ಮಾಡಲಾಗಿದೆ. ರೋಗ ಲಕ್ಷಣಗಳುಳ್ಳ ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದೊಯ್ಯಲು ಎರಡು ಅಂಬುಲೆನ್ಸ್‌ಗಳನ್ನು ಸಹ ಏರ್‌ಪೋರ್ಟ್‌ನಲ್ಲಿ ಮೀಸಲಿಡಲಾಗಿದೆ ಎಂದು ಡಿಸಿ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮತ್ತೆ ಟೆಸ್ಟಿಂಗ್ ಎಡವಟ್ಟು- ಕೋವಿಡ್ ಟೆಸ್ಟ್ ಮಾಡಿಸದಿದ್ರೂ ಬಂತು ಮೆಸೇಜ್