ಬಾಲಿವುಡ್‌ನ ಮುದ್ದಾದ ಜೋಡಿ ಸಿದ್ಧಾರ್ಥ್ (Siddarth Malhotra) ಮತ್ತು ಕಿಯಾರಾ (Kiara Advani) ಮದುವೆಯ ಗುಡ್ ನ್ಯೂಸ್‌ಗಾಗಿ ಕಾಯ್ತಿದ್ದ ಫ್ಯಾನ್ಸ್‌ಗೆ ಇದೀಗ ಶುಭ ಸುದ್ದಿ ಸಿಕ್ಕಿದೆ. ಮದುವೆಯ ಬಗ್ಗೆ ನಟಿ ಕಿಯಾರಾ ಸೋಷಿಯಲ್ ಮೀಡಿಯಾದಲ್ಲಿ ಸೂಚನೆ ಕೊಟ್ಟಿದ್ದಾರೆ.
ಬಿಟೌನ್‌ನಲ್ಲಿ ಮತ್ತೊಂದು ಜೋಡಿ ಹಸೆಮಣೆ (Wedding Knot) ಏರಲು ರೆಡಿಯಾಗಿದೆ. ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಸಾಕಷ್ಟು ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದಾರೆ. ಆದರೆ ಎಲ್ಲೂ ಕೂಡ ತಮ್ಮ ಪ್ರೀತಿಯ ಬಗ್ಗೆ ಈ ಜೋಡಿ ಅಧಿಕೃತ ಮಾಹಿತಿ ಬಿಟ್ಟು ಕೊಟ್ಟಿಲ್ಲ. ಆದರೆ ಸದ್ಯದಲ್ಲೇ ಸಿಹಿ ಸುದ್ದಿ ಘೋಷಿಸುವುದಾಗಿ ಸ್ವತಃ ಕಿಯಾರಾ ಸಾಮಾಜಿಕ ಜಾಲತಾಣದಲ್ಲಿ ಅನೌನ್ಸ್ ಮಾಡಿದ್ದಾರೆ.
View this post on Instagram
`ಶೇರ್‌ಷಾ’ ಚಿತ್ರದ ಮೂಲಕ ಮೋಡಿ ಮಾಡಿದ್ದ ಜೋಡಿ ಸದ್ಯದಲ್ಲೇ ಹೊಸ ಬಾಳಿಗೆ ಕಾಲಿಡೋದು ಪಕ್ಕಾ ಎನ್ನಲಾಗುತ್ತಿದೆ. ಇದಕ್ಕೆ ಪುಷ್ಠಿ ನೀಡುವಂತಹ ಕಿಯಾರಾ ಪೋಸ್ಟ್ ಕೂಡ ಸದ್ದು ಮಾಡುತ್ತಿದೆ. ಏನನ್ನೂ ಹೆಚ್ಚು ಕಾಲ ಸೀಕ್ರೆಟ್ ಆಗಿಡಲು ಸಾಧ್ಯವಿಲ್ಲ. ಶೀಘ್ರದಲ್ಲೇ ಘೋಷಿಸುತ್ತೇನೆ. ಕಾಯ್ತಿರಿ, ಡಿಸೆಂಬರ್ 2ಕ್ಕೆ ಎಂದು ನಟಿ ಮದುವೆ ಬಗ್ಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಅನಿರುದ್ಧ್-ಅನು ಜೋಡಿ
View this post on Instagram
ಸ್ಪೆಷಲ್ ವೀಡಿಯೋ ಹಂಚಿಕೊಂಡು ಡಿಸೆಂಬರ್ 2 ಎಂದು ಕಿಯಾರಾ ಸೂಚನೆ ನೀಡಿರುವುದು. ಇದು ನಿಜಕ್ಕೂ ಸಿದ್ಧಾರ್ಥ್ ಜೊತೆಗಿನ ಮದುವೆ ಸುದ್ದಿನೇ ಎಂದು ಫ್ಯಾನ್ಸ್‌ಗೆ ಕಾಮೆಂಟ್ ಮಾಡುತ್ತಿದ್ದಾರೆ. ಎಲ್ಲದಕ್ಕೂ ಕಾದುನೋಡಬೇಕಿದೆ.