ಈಗಾಗಲೇ ಸಾಕಷ್ಟು ಸಮಾಜಸೇವೆ ಮಾಡಿರುವ ಕಿಚ್ಚ ಸುದೀಪ್ ಅವರನ್ನು ಕರ್ನಾಟಕ ಸರಕಾರವು ‘ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ’ಯನ್ನಾಗಿ ನೇಮಕ ಮಾಡಿದೆ. ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರವನ್ನು ಇಲಾಖೆ ಸಚಿವ ಪ್ರಭು ಚೌಹಾಣ್, ಇಂದು ಬೆಂಗಳೂರಿನ ಸುದೀಪ್ ಅವರ ನಿವಾಸದಲ್ಲಿ ರಾಯಭಾರಿ ನೇಮಕಾತಿ ಪತ್ರ ನೀಡಿ ಸನ್ಮಾನಿಸಿದರು.
Advertisement
ನೇಮಕಾತಿ ಪತ್ರವನ್ನು ಸ್ವೀಕರಿಸಿ ಮಾತನಾಡಿದ ಸುದೀಪ್, ಇದೇ ವೇಳೆ 31 ಗೋವುಗಳನ್ನು ದತ್ತು ಪಡೆವುದಾಗಿ ಅವರು ತಿಳಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿರುವ ಸರ್ಕಾರಿ ಗೋಶಾಲೆಗಳಿಂದ ಗೋವುಗಳನ್ನು ದತ್ತು ಪಡೆಯಲು ನಿರ್ಧಾರ ಮಾಡಿರುವುದಾಗಿ ಸುದೀಪ್ ತಿಳಿಸಿದ್ದಾರೆ. ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ಅವರು ದತ್ತು ಪಡೆಯಲಿದ್ದಾರೆ. ಇದನ್ನೂ ಓದಿ: ರತನ್ ಟಾಟಾ ಬಯೋಪಿಕ್‌ಗೆ ಸುಧಾ ಕೊಂಗರಾ ಆ್ಯಕ್ಷನ್ ಕಟ್
Advertisement
Advertisement
ಸುದೀಪ್ ಅವರು ಸರಕಾರದ ಕಾರ್ಯಕ್ರಮಗಳಿಗೆ ರಾಯಭಾರಿ ಆಗುತ್ತಿರುವುದು ಇದೇ ಮೊದಲೇನೂ ಅಲ್ಲ. ಈ ಹಿಂದೆಯೂ ಅವರು ಹಲವಾರು ಕಾರ್ಯಕ್ರಮಗಳ ಜೊತೆ ಕೈ ಜೋಡಿಸಿದ್ದಾರೆ. ಅಲ್ಲದೇ, ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿಯೂ ಅವರು ಸಹಕಾರಿ ಆಗಿದ್ದಾರೆ. ಈ ಸಲ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ಆಗುವ ಮೂಲಕ ಪುಣ್ಯಕೋಟಿ ಉಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.