ಬಳ್ಳಾರಿ: ಸ್ಯಾಂಡಲ್‍ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ನಿಮಿತ್ತ ಅಭಿಮಾನದ ಹೆಸರಲ್ಲಿ ಪ್ರಾಣಿ ಬಲಿ ಕೊಡುವ ಮೂಲಕ ವಿಕೃತಿ ಮೆರೆದಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದಲ್ಲಿ ನಡೆದಿದೆ.
ಇಂದು ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಅಭಿಮಾನಿಗಳು, ಸಾರ್ವಜನಿಕವಾಗಿ ಕೋಣ ಬಲಿಕೊಟ್ಟು ಹುಟ್ಟುಹಬ್ಬವನ್ನು ಆಚರಣೆ ಮಾಡಿದ್ದಾರೆ. ರಾಜ್ಯಾದ್ಯಂತ ಸುದೀಪ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಕೇಕ್ ಕತ್ತರಿಸಿ, ಬಡವರಿಗೆ ಊಟ ಹಾಕುವ ಮೂಲಕ ಆಚರಣೆ ಮಾಡಿದ್ದಾರೆ. ಈ ನಡುವೆ ಬಳ್ಳಾರಿಯ ಸಂಡೂರು ತಾಲೂಕಿನ ಬಂಡ್ರಿಯಲ್ಲಿ ಅಭಿಮಾನಿಗಳು ನಡು ರಸ್ತೆಯಲ್ಲಿ ಕೋಣ ಬಲಿಕೊಡುವ ಮೂಲಕ ಹುಚ್ಚು ಅಭಿಮಾನ ಮೆರೆದಿದ್ದಾರೆ. ಇದನ್ನೂ ಓದಿ: ಚಂದನವನದಲ್ಲಿ ಸುದೀಪ್ ಸಿನಿ ಜರ್ನಿ
ಕೋಣ ಬಲಿಕೊಡುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನದ ಹೆಸರಲ್ಲಿ ಪ್ರಾಣಿ ಹಿಂಸೆ ಮಾಡಿ ವಿಕೃತಿ ಮೆರೆದ ಅಭಿಮಾನಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ಇತ್ತೀಚೆಗೆ ಗೋಹತ್ಯೆ ನಿಷೇಧದ ಬಗ್ಗೆ ಹೊಸಪೇಟೆಯಲ್ಲಿ ಅಧಿಕಾರಿಗೆ ಪಶುಸಂಗೋಪನಾ ಇಲಾಖೆ ಸಚಿವ ಪ್ರಭು ಚೌಹ್ಹಾಣ್ ಅವರು ಕ್ಲಾಸ್ ತೆಗೆದುಕೊಂಡಿದ್ದರು. ಜಿಲ್ಲೆಗೆ ಸಚಿವರು ಬಂದು ಹೋಗಿ ಎರಡೇ ದಿನದಲ್ಲಿ ಪ್ರಾಣಿಬಲಿ ಕೊಟ್ಟು ಅಭಿಮಾನಿಗಳು ವಿಕೃತಿ ಮೆರೆದಿದ್ದಾರೆ. ಇದನ್ನೂ ಓದಿ: ವಿಕ್ರಾಂತ್ ರೋಣ ‘ಡೆಡ್ ಮ್ಯಾನ್ ಆಂಥೆಮ್’ ಔಟ್- ಸ್ಟೈಲಿಶ್ ಲುಕ್‍ನಲ್ಲಿ ಸುದೀಪ್