ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ ‘ಕೆಡಿ’ (KD) ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟಿಸಲಿದ್ದಾರೆ ಎನ್ನಲಾದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ:ತಪ್ಪು ಮಾಡಿದ್ಮೇಲೆ ಕ್ಷಮೆ ಕೇಳೋದ್ರಲ್ಲಿ ತಪ್ಪೇನಿದೆ- ಕಮಲ್ ಹಾಸನ್ ಹೇಳಿಕೆಗೆ ರಚಿತಾ ರಾಮ್ ಕಿಡಿ


‘ಕೆಡಿ’ ಮಲ್ಟಿ ಸ್ಟಾರ್ ಸಿನಿಮಾ. ಧ್ರುವ ಜೊತೆ ರೀಷ್ಮಾ ನಾಣಯ್ಯ, ಸಂಜಯ್ ದತ್, ಶಿಲ್ಪಾ ಶೆಟ್ಟಿ, ರವಿಚಂದ್ರನ್, ರಮೇಶ್ ಅರವಿಂದ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಹೀಗಾಗಿ ಸುದೀಪ್ ನಟಿಸಿದ್ರೂ ಅಚ್ಚರಿಪಡಬೇಕಿಲ್ಲ. ಅದಷ್ಟೇ ಅಲ್ಲ, ಈ ಹಿಂದೆ ‘ದಿ ವಿಲನ್’ ಚಿತ್ರದಲ್ಲಿ ಸುದೀಪ್‌ಗೆ ಪ್ರೇಮ್ ನಿರ್ದೇಶನ ಮಾಡಿದ್ದರು. ಹಾಗಾಗಿ ಚಿತ್ರತಂಡದ ಕಡೆಯಿಂದ ಈ ಬಗ್ಗೆ ಗುಡ್ ನ್ಯೂಸ್ ಸಿಗಬಹುದು ಎಂಬುದು ಅಭಿಮಾನಿಗಳ ಲೆಕ್ಕಾಚಾರ. ಇದನ್ನೂ ಓದಿ:ಕ್ಷಮೆ ಕೇಳಲ್ಲ ಅಂದಾಗ ಬಿಸಿ ಮುಟ್ಟಿಸಬೇಕು- ಕಮಲ್ ಹಾಸನ್ ವಿರುದ್ಧ ವಸಿಷ್ಠ ಸಿಂಹ ಆಕ್ರೋಶ
ಮೊದಲ ಬಾರಿಗೆ ಧ್ರುವ ಮತ್ತು ಕೊಡಗಿನ ಬೆಡಗಿ ರೀಷ್ಮಾ ಜೊತೆಯಾಗಿ ನಟಿಸಿದ್ದಾರೆ. ಈ ಹೊಸ ಜೋಡಿ ನಟನೆ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ‘ಕೆವಿಎನ್’ ಸಂಸ್ಥೆ ನಿರ್ಮಿಸಿರುವ ಈ ಸಿನಿಮಾ ರಿಲೀಸ್ ಬಗ್ಗೆ ಸದ್ಯದಲ್ಲೇ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.

