ಸ್ಯಾಂಡಲ್‌ವುಡ್‌ನಲ್ಲಿ ಕಿಚ್ಚ ಸುದೀಪ್(Kiccha Sudeep)- ನಿರ್ಮಾಪಕ ಕುಮಾರ್ ಕಾಲ್‌ಶೀಟ್ ಕದನಕ್ಕೆ ಪೂರ್ಣ ವಿರಾಮ ಬೀಳುವ ಮುಂಚಯೇ ಕಿಚ್ಚನ 46 ಸಿನಿಮಾಗೆ ಸಿದ್ಧತೆ ನಡೆಯುತ್ತಿದೆ. ಕುಮಾರ್ ಜೊತೆಗಿನ ಸಂಧಾನದ ಮಾತುಕತೆ ನಡೆಯುತ್ತಿದೆ. ಈ ವಾರದ ಅಂತ್ಯದಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ. ಈ ಬೆನ್ನಲ್ಲೇ ವಿವಾದ ಬದಿಗಿಟ್ಟು ಕಾಯಕವೇ ಕೈಲಾಸ ಅಂತಾ ಸುದೀಪ್ ಹೊಸ ಸಿನಿಮಾದ ಶೂಟಿಂಗ್‌ನತ್ತ ಮುಖ ಮಾಡಿದ್ದಾರೆ. ಇದನ್ನೂ ಓದಿ:‘BAD’ ಸಿನಿಮಾದಲ್ಲಿ ಪ್ರೀತಿಯ ಪ್ರತಿನಿಧಿಯಾದ ಅಪೂರ್ವ ಭಾರದ್ವಾಜ್
‘ವಿಕ್ರಾಂತ್ ರೋಣ’ ಸಿನಿಮಾದ ಬಳಿಕ ತನ್ನ ಜೊತೆ ಸಿನಿಮಾ ಮಾಡ್ತಾರೆ ಅಂತಾ ಮಾತುಕತೆ ಆಗಿತ್ತು. ಹಣ ಪಡೆದು ಸಾಕಷ್ಟು ಸಮಯದಿಂದ ಕಾಲ್‌ಶೀಟ್ ನೀಡದೇ ಸುದೀಪ್ ಸತಾಯಿಸುತ್ತಿದ್ದಾರೆ ಎಂದು ನಿರ್ಮಾಪಕ ಕುಮಾರ್ (Producer Kumar) ಆರೋಪಿಸಿದ್ದರು. ಇದಾದ ಬಳಿಕ ಸುದೀಪ್ ಕಾನೂನು ಸಮರ ಸಾರಿದ್ದರು. ಬಳಿಕ ರವಿಚಂದ್ರನ್ (Ravichandran) ಅವರ ಜೊತೆ ಕುಮಾರ್-ಸುದೀಪ್ ಇಬ್ಬರ ಸಂಧಾನ ಸಭೆ ನಡೆದಿತ್ತು. ಆದರೆ ಇದು ಇನ್ನೂ ಅಂತಿಮ ಹಂತಕ್ಕೆ ತಲುಪಿಲ್ಲ. ಕೊನೆಯ ಮೀಟಿಂಗ್‌ನಲ್ಲಿ ಶಿವಣ್ಣ (Shivarajkumar) ಕೂಡ ಭಾಗಿಯಾಗಲಿದ್ದಾರೆ. ಬಳಿಕ ಕಾಲ್‌ಶೀಟ್ ಕದನಕ್ಕೆ ಬ್ರೇಕ್ ಸಿಗಲಿದೆ.
ʼವಿಕ್ರಾಂತ್ ರೋಣ’ (Vikrant Rona) ಸಿನಿಮಾ 2022ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ಸುದೀಪ್ ಒಂದು ಬ್ರೇಕ್ ಪಡೆದರು. ವೃತ್ತಿ ಜೀವನದಲ್ಲಿ ಅವರು ಪಡೆದ ಮೊದಲ ಬ್ರೇಕ್ ಇದು ಅನ್ನೋದು ವಿಶೇಷ. ಈ ಸಮಯದಲ್ಲಿ ಸುದೀಪ್ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ಕೊಟ್ಟರು. ಚುನಾವಣಾ ಪ್ರಚಾರದಲ್ಲಿ ಭಾಗಿ ಆದರು. ಬಿಜೆಪಿ ಕ್ಷೇತ್ರದ ಪರ ಪ್ರಚಾರಕ್ಕೆ ಕಣಕ್ಕೆ ಇಳಿದರು. ಈಗ ಅವರು ಶೂಟಿಂಗ್ ಹೊರಡೋಕೆ ರೆಡಿ ಆಗಿದ್ದಾರೆ.
‘K 46’ ಚಿತ್ರದ ಶೂಟಿಂಗ್ ಆಗಸ್ಟ್ ಮೊದಲ ವಾರದಿಂದ ಪ್ರಾರಂಭ ಆಗಲಿದೆ. 55 ದಿನಗಳ ಸುದೀರ್ಘ ಶೆಡ್ಯೂಲ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಯಲಿದೆ. ಸಿನಿಮಾದ ಮೊದಲ ಝಲಕ್ ಸಂಚಲನ ಮೂಡಿಸಿದೆ. ನಾನು ಮನುಷ್ಯನಲ್ಲ ರಾಕ್ಷಸ ಎನ್ನುವ ಕಿಚ್ಚನ ಖಡಕ್ ಡೈಲಾಗ್ ಫ್ಯಾನ್ಸ್ ಕಿಕ್ ಕೊಟ್ಟಿತ್ತು. ಈಗ ಸಿನಿಮಾ ಚಿತ್ರೀಕರಣಕ್ಕೆ ಕೌಂಟ್‌ಡೌನ್ ಶುರುವಾಗಿದೆ. ವಿಜಯ್ ಕಾರ್ತಿಕೇಯ ಅವರು ‘K 46ʼ ಚಿತ್ರಕ್ಕೆ ನಿರ್ದೇಶನ ಮಾಡ್ತಿದ್ದಾರೆ. ವಿ ಕ್ರಿಯೇಷನ್ಸ್ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]