ಭಾರತ Vs ಶ್ರೀಲಂಕಾ ಟೆಸ್ಟ್ – ಅಪ್ಪು ಫೋಟೋ ಜೊತೆ ಚಿನ್ನಸ್ವಾಮಿಯಲ್ಲಿ ಕಾಣಿಸಿಕೊಂಡ ಸುದೀಪ್

Public TV
1 Min Read
SUDEEP IN CHENNASWAMY

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವಿನ ಪಿಂಕ್ ಬಾಲ್ ಟೆಸ್ಟ್ ಪಂದ್ಯ ನೋಡಲು ಆಗಮಿಸಿದ ಅಭಿನಯ ಚಕ್ರವರ್ತಿ ಸುದೀಪ್, ಅಪ್ಪು ಪೋಸ್ಟರ್ ಜೊತೆ ಕಾಣಿಸಿಕೊಂಡಿದ್ದಾರೆ.

IND VS SL

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಶ್ರೀಲಂಕಾ ನಡುವಿನ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಇಂದಿನಿಂದ ಆರಂಭವಾಗಿದೆ. ಇದೀಗ 2 ವರ್ಷಗಳ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಈ ಪಂದ್ಯವನ್ನು ವೀಕ್ಷಿಸಲು ಸುದೀಪ್ ಕೂಡ ಚಿನ್ನಸ್ವಾಮಿ ಅಂಗಳಕ್ಕೆ ಆಗಮಿಸಿದ್ದಾರೆ. ಈ ವೇಳೆ ಅಭಿಮಾನಿಯೋರ್ವರು ಪುನೀತ್ ರಾಜ್ ಕುಮಾರ್ ಅವರ ಫೋಟೋ ಹಿಡಿದುಕೊಂಡು ಬಂದಿದ್ದಾರೆ. ಅವರೊಂದಿಗೆ ಸುದೀಪ್ ಕೂಡ ನಿಂತು ಅಪ್ಪುವನ್ನು ನೆನೆದಿದ್ದಾರೆ. ಇದನ್ನೂ ಓದಿ: ಡೇ – ನೈಟ್ ಪಿಂಕ್ ಬಾಲ್ ಟೆಸ್ಟ್‌ಗೆ ಬೆಂಗಳೂರು ಸಜ್ಜು – 2 ವರ್ಷಗಳ ಬಳಿಕ ಚಿನ್ನಸ್ವಾಮಿಯಲ್ಲಿ ಟೀಂ ಇಂಡಿಯಾ ಕಾದಾಟ

SUDEEP

ಅಭಿಮಾನಿ ತಂದಿರುವ ಪೋಸ್ಟರ್‌ನಲ್ಲಿ ಅಪ್ಪು ಫೋಟೋ ಜೊತೆಗೆ ನಾವು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆಯಲಾಗಿದೆ. ಇದೀಗ ಸುದೀಪ್, ಅಪ್ಪು ಪೋಸ್ಟರ್ ಜೊತೆ ಇರುವ ಫೋಟೋ ವೈರಲ್ ಆಗುತ್ತಿದೆ. ಇದನ್ನೂ ಓದಿ: ಸ್ಮೃತಿ ಮಂದಾನ, ಕೌರ್ ಶತಕದ ವೈಭವ – ವಿಂಡೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ

PUNEETH 7

ಚಿನ್ನಸ್ವಾಮಿ ಅಂಗಳದಲ್ಲಿ ಟಾಸ್‍ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದ್ದು, ಆರಂಭದಲ್ಲೇ ಕನ್ನಡಿಗ ಮಯಾಂಕ್ ಅಗರ್ವಾಲ್ 4 ರನ್ (7 ಎಸೆತ, 1 ಬೌಂಡರಿ) ಮತ್ತು ರೋಹಿತ್ ಶರ್ಮಾ 15 ರನ್ (25 ಎಸೆತ, 1 ಬೌಂಡರಿ, 1 ಸಿಕ್ಸ್) ವಿಕೆಟ್ ಕಳೆದುಕೊಂಡಿದೆ.

Share This Article
Leave a Comment

Leave a Reply

Your email address will not be published. Required fields are marked *