ಬೆಂಗಳೂರು: ಸತತ ಎರಡು ದಿನಗಳ ಐಟಿ ಪರಿಶೋಧದ ಬಳಿಕ ಕಿಚ್ಚ ಸುದೀಪ್ ಈಗ ಬಿಗ್ ಬಾಸ್ ಶೂಟಿಂಗ್ ಗೆ ತೆರಳಿದ್ದಾರೆ.
ಸುದೀಪ್ ಇಂದು ಬೆಳ್ಳಬೆಳಗ್ಗೆ 5.30ಕ್ಕೆ ಬಿಗ್ ಬಾಸ್ ಶೂಟಿಂಗ್ ಸ್ಪಾಟ್ ಗೆ ತೆರಳಿದ್ದಾರೆ. ಸುದೀಪ್ ಮನೆಯಲ್ಲಿ ಕೊಂಚ ರೆಸ್ಟ್ ಮಾಡಿ ನಂತರ ಬಿಗ್ ಬಾಸ್ ರೀಡಿಂಗ್ ತೆಗೆದುಕೊಳ್ಳುತ್ತಿದ್ದಾರೆ. ಕೆಲವೇ ಗಂಟೆಗಳಲ್ಲಿ ಬಿಗ್ ಬಾಸ್ ಶೂಟಿಂಗ್ ಆರಂಭವಾಗಲಿದೆ. ಇದನ್ನೂ ಓದಿ: ಐಟಿ ಅಧಿಕಾರಿಗಳ ಬಳಿ ಕಿಚ್ಚ ಸುದೀಪ್ ಮನವಿ
ಪ್ರತಿ ಶನಿವಾರ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ‘ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆ ಟೆಲಿಕಾಸ್ಟ್ ಆಗುತ್ತದೆ. ಹೀಗಾಗಿ ಪರಿಶೀಲನೆಯನ್ನು ಬೇಗ ಮುಗಿಸುವಂತೆ ಅಧಿಕಾರಿಗಳ ಬಳಿ ಸುದೀಪ್ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸುದೀಪ್ ಮನೆಯಲ್ಲಿ ಐಟಿ ರೇಡ್ ಅಂತ್ಯ- ಬೆಳಗ್ಗೆ ತೆರಳಿದ ಬಳಿಕ ಮತ್ತೆ ಅಧಿಕಾರಿಗಳು ಆಗಮಿಸಿದ್ದು ಯಾಕೆ?
ಶನಿವಾರ ಬಿಗ್‍ಬಾಸ್ ಶೂಟಿಂಗ್ ಇದೆ. ನಾನು ಹೋಗಲೇಬೇಕು, ಇಲ್ಲದಿದ್ದಲ್ಲಿ `ವಾರದ ಕಥೆ ಕಿಚ್ಚನ ಜೊತೆ’ ಸಂಚಿಕೆಗೆ ಅಡ್ಡಿಯಾಗುತ್ತದೆ. ಸಂಜೆಯೊಳಗೆ ಪರಿಶೀಲನೆ ಮಾಡಿ ಮುಗಿಸುವಂತೆ ಶುಕ್ರವಾರವೇ ಸುದೀಪ್ ಮನವಿ ಮಾಡಿಕೊಂಡಿದ್ದರು ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿತ್ತು.