ಬೆಂಗಳೂರು: ಸ್ಯಾಂಡಲ್ವುಡ್ನ ಬಹುನೀರಿಕ್ಷಿತ ಸಿನಿಮಾ ಮತ್ತು ಕಿಚ್ಚ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಕುರಿತಾಗಿ ಬಾಲಿವುಡ್ ನಟ ಸಲ್ಮಾನ್ ಖಾನ್ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
Best wishes Sudeep… trailer looking good . . @KicchaSudeep #VikrantRonaGlimpse https://t.co/vMoJTdhYNq
— Salman Khan (@BeingSalmanKhan) September 4, 2021
ಸೆಪ್ಟೆಂಬರ್ 2 ಕಿಚ್ಚ ಸುದೀಪ್ ಬರ್ತ್ಡೇ. ಈ ವಿಶೇಷ ದಿನದಂದು ವಿಕ್ರಾಂತ್ ರೋಣ ಸಿನಿಮಾದ ಫಸ್ಟ್ ಗ್ಲಿಂಪಸ್ ರಿಲೀಸ್ ಆಗಿತ್ತು. ಇದಕ್ಕೆ ಡೆಡ್ ಮ್ಯಾನ್ಸ್ ಆ್ಯಂಥಮ್ ಎಂದು ಹೆಸರಿಡಲಾಗಿದೆ. ಇದನ್ನು ಸಲ್ಮಾನ್ ಖಾನ್ ವೀಕ್ಷಣೆ ಮಾಡಿದ್ದಾರೆ. ಇದನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಅವರು ಸುದೀಪ್ ಬೆಸ್ಟ್ ವಿಶಸ್ ಎಂದು ಬರೆದುಕೊಂಡಿದ್ದಾರೆ. ಜತೆಗೆ ಫಸ್ಟ್ ಗ್ಲಿಂಪಸ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಈ ಟ್ವೀಟ್ ಅನ್ನು ಸುದೀಪ್ ರೀಟ್ವೀಟ್ ಮಾಡಿಕೊಂಡು ಧನ್ಯವಾದ ಹೇಳಿದ್ದಾರೆ. ಇದನ್ನೂ ಓದಿ: ಜನ್ಮದಿನಾಚರಣೆಯ ಸಂಭ್ರಮದಲ್ಲಿ ಸಿಂಪಲ್ ನಟಿ ಶ್ವೇತಾ ಶ್ರೀವಾತ್ಸವ್
Happy tat you gotta see it n loved it @BeingSalmanKhan sir.. happier tat you shared it.
Luv to you for the team of #VikrantRоna
♥️♥️♥️????♥️♥️♥️@Asli_Jacqueline @shaliniartss @JackManjunath @anupsbhandari @nirupbhandari @neethaofficial @AJANEESHB @LahariMusic @TSeries https://t.co/CYDvEsuRmu
— Kichcha Sudeepa (@KicchaSudeep) September 4, 2021
ಕಿಚ್ಚ ಸುದೀಪ್ ಹಾಗೂ ಸಲ್ಮಾನ್ ಖಾನ್ ಗೆಳೆತನದ ಬಗ್ಗೆ ಮತ್ತೆ ಹೊಸದಾಗಿ ಹೇಳಬೇಕಿಲ್ಲ. ದಬಾಂಗ್ 3 ಸಿನಿಮಾದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈ ವೇಳೆ ಇಬ್ಬರ ನಡುವೆ ಒಳ್ಳೆಯ ಗೆಳೆತನ ಬೆಳೆದಿದೆ. ಅದು ಈಗಲೂ ಮುಂದುವರಿದುಕೊಂಡು ಬಂದಿದೆ. ಈಗ ಸುದೀಪ್ ನಟನೆಯ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಸಲ್ಮಾನ್ ಖಾನ್ ಮೆಚ್ಚುಗೆಯ ಮಾತನಾಡಿದ್ದಾರೆ.