ಕಿಚ್ಚ ಸುದೀಪ್ ಸಿನಿಮಾ ಮಾಡಲಿದೆ ತಮಿಳಿನ ಪ್ರಸಿದ್ಧ ನಿರ್ಮಾಣ ಸಂಸ್ಥೆ

Public TV
1 Min Read
sudeep

ಸುದೀಪ್ ಅವರ ಮುಂದಿನ ಸಿನಿಮಾ ಯಾವುದು ಎನ್ನುವುದರ ಬಗ್ಗೆ ಯಾವುದೇ ಕ್ಲ್ಯಾರಿಟಿ ಇಲ್ಲ. ಯಾವತ್ತು ಆ ಸಿನಿಮಾದ ಬಗ್ಗೆ ಮಾಹಿತಿ ಸಿಗಲಿದೆ ಎನ್ನುವುದೂ ಗೊತ್ತಿಲ್ಲ. ಆದರೂ, ಸುದೀಪ್ ಅವರ ಸಿನಿಮಾದ ಸುದ್ದಿಗಳು ಬರುತ್ತಲೇ ಇವೆ. ಈಗಾಗಲೇ ಸುದೀಪ್ ಎರಡು ಸಿನಿಮಾಗಳಿಗೆ ಸಹಿ ಮಾಡಿದ್ದಾರೆ. ಒಂದು ಚಿತ್ರವನ್ನು ಅನೂಪ್ ಭಂಡಾರಿ ನಿರ್ದೇಶನ ಮಾಡುತ್ತಿದ್ದರೆ, ಮತ್ತೊಂದು ಚಿತ್ರಕ್ಕೆ ನಂದ ಕಿಶೋರ್ ನಿರ್ದೇಶಕರು. ಈ ಎರಡರಲ್ಲಿ ಯಾವುದು ಮೊದಲಾಗುವುದೋ ಕಾದು ನೋಡಬೇಕು.

sudeep 1 4

ಈ ಮಧ್ಯ ಮತ್ತೊಂದು ಸುದ್ದಿ ಹೊರಬಂದಿದ್ದು, ತಮಿಳಿನ ಹೆಸರಾಂತ ನಿರ್ಮಾಣ ಸಂಸ್ಥೆಯಾದ ಲೈಕಾ ಪ್ರೊಡಕ್ಷನ್ ಈ ಬಾರಿ ಸುದೀಪ್ ಚಿತ್ರಕ್ಕೆ ಬಂಡವಾಳ ಹಾಕಲಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಸುದೀಪ್ ಅವರ ಜೊತೆ ಮಾತುಕತೆ ಕೂಡ ನಡೆದಿದೆಯಂತೆ. ಲೈಕಾ ಸಂಸ್ಥೆಯು ಯಾವ ಸಿನಿಮಾ, ನಿರ್ದೇಶಕರು ಯಾರು ಎನ್ನುವುದನ್ನು ಬಹಿರಂಗ ಪಡಿಸದೇ ಇದ್ದರೂ ಕನ್ನಡ ಸಿನಿಮಾ ರಂಗದಲ್ಲಿ ಈ ಸುದ್ದಿಯಂತೂ ಸಖತ್ ಸದ್ದು ಮಾಡುತ್ತಿದೆ. ಇದನ್ನೂ ಓದಿ: ನಟಿ ಅಶು ರೆಡ್ಡಿ ಕಾಲು ಹಿಡಿದ ರಾಮ್ ಗೋಪಾಲ್ ವರ್ಮಾ: ನೆಟ್ಟಿಗರು ಶಾಕ್

anup bhandari and sudeep 2

ಹೊಂಬಾಳೆ ಬ್ಯಾನರ್ ನಲ್ಲೂ ಸುದೀಪ್ ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಹೊಂಬಾಳೆ ಕಾರ್ತಿಕ್ ಅವರೇ ಸುದೀಪ್ ಜೊತೆಗಿನ ಫೋಟೋವನ್ನು ಹಂಚಿಕೊಂಡು ಸಣ್ಣದೊಂದು ಸುಳಿವನ್ನೂ ನೀಡಿದ್ದಾರೆ. ಈ ಸಿನಿಮಾ ಯಾವಾಗ ಆಗಲಿದೆ ಎನ್ನುವುದು ಬಹಿರಂಗವಾಗಿಲ್ಲ. ಆದರೆ, ಮುಂದಿನ ದಿನಗಳಲ್ಲಿ ಈ ಸುದ್ದಿಯೂ ಅಭಿಮಾನಿಗಳಿಗೆ ಸಂಭ್ರಮ ತರುವುದಂತೂ ಸುಳ್ಳು ಅಲ್ಲ. ಇಷ್ಟರ ಮಧ್ಯ ಸುದೀಪ್ ಸಿನಿಮಾವೊಂದನ್ನು ನಿರ್ದೇಶನ ಮಾಡಲಿದ್ದಾರೆ. ಈ ಸಿನಿಮಾದಲ್ಲಿ ಯಾರೆಲ್ಲ ಇರಲಿದ್ದಾರೆ ಎನ್ನುವುದನ್ನು ಕಾದು ನೋಡೋಣ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *