Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಯುವ’ ಸಿನಿಮಾ ನೋಡಿ ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಯುವ’ ಸಿನಿಮಾ ನೋಡಿ ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್

Cinema

‘ಯುವ’ ಸಿನಿಮಾ ನೋಡಿ ಧನ್ಯವಾದ ತಿಳಿಸಿದ ಕಿಚ್ಚ ಸುದೀಪ್

Public TV
Last updated: April 15, 2024 4:31 pm
Public TV
Share
2 Min Read
Yuva with sudeep 1
SHARE

ಕಿಚ್ಚ ಸುದೀಪ್ ‘ಯುವ’ (Yuva) ಸಿನಿಮಾವನ್ನು ನೋಡಿ ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದ್ದಾರೆ. ತಮಗಾಗಿ ಸ್ಪೆಷಲ್ ಶೋ ಆಯೋಜನೆ ಮಾಡಿದ್ದಕ್ಕೆ ಹೊಂಬಾಳೆ ಫಿಲ್ಮ್ಸ್ ಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೇ, ಯುವರಾಜ್ ಕುಮಾರ್ ಅವರಿಗೆ ಉತ್ತಮ ಭವಿಷ್ಯವಿದೆ ಎಂದು ಹಾರೈಸಿದ್ದಾರೆ. ವಿಶೇಷ ಪ್ರದರ್ಶನವನ್ನು ಸುದೀಪ್ (Kichcha Sudeep) ಮನೆಯಲ್ಲೇ ಆಯೋಜನೆ ಮಾಡಲಾಗಿತ್ತು. ನಿರ್ದೇಶಕ ಸಂತೋಷ್ ಆನಂದ್ ರಾಮ್, ಯುವ (Yuvaraj Kumar) ಹಾಗೂ ಕಾರ್ತಿಕ್ ಸೇರಿದಂತೆ ಹಲವು ಭಾಗಿಯಾಗಿದ್ದರು.

Yuva with sudeep 2

ಸಕ್ಸಸ್ ಸಂಭ್ರಮ

ವಿಶ್ವವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತಹ ಕೆ.ಜಿ.ಎಫ್, ಕಾಂತಾರ, ರಾಜಕುಮಾರ ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಲಾಂಛದಡಿಯಲ್ಲಿ ವಿಜಯ್ ಕಿರಗಂದೂರ್ ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದಲ್ಲಿ ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಮೊದಲ ಚಿತ್ರ “ಯುವ” ರಾಜ್ಯಾದ್ಯಂತ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. ಈ ಮೂಲಕ ಹೊಂಬಾಳೆ ಫಿಲಂಸ್ ನ ಗೆಲುವಿನ ಓಟಕ್ಕೆ  ಮತ್ತೊಂದು ಚಿತ್ರ ಸೇರ್ಪಡೆಯಾಗಿದೆ. ಈ ಯಶಸ್ಸಿನ ಸಂಭ್ರಮವನ್ನು ಸಂಭ್ರಮಿಸಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.

Yuva 1

ರಾಜ್ಯದ ಜನತೆ “ಯುವ” ಚಿತ್ರವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಚಿತ್ರ ಮೂರನೇ ವಾರಕ್ಕೆ ಕಾಲಿಟ್ಟಿದೆ. ಈಗಲೂ ಜನ ಕುಟುಂಬ ಸಮೇತ ಬಂದು ಸಿನಿಮಾ ನೋಡುತ್ತಿದ್ದಾರೆ. ಕನ್ನಡ ಕಲಾರಸಿಕರಿಗೆ, ಮಾಧ್ಯಮದವರಿಗೆ, ಹೊಂಬಾಳೆ ಫಿಲಂಸ್ ಸಂಸ್ಥೆಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಈ ಸಂದರ್ಭದಲ್ಲಿ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್.

Yuva 2

ಜನರು ನನ್ನ ಮೊದಲ ಚಿತ್ರಕ್ಕೆ ತೋರುತ್ತಿರುವ ಒಲವಿಗೆ ಮನ ತುಂಬಿ ಬಂದಿದೆ ಎಂದು ಮಾತನಾಡಿದ ನಾಯಕ ಯುವ ರಾಜಕುಮಾರ್, ಪ್ರಥಮವಾಗಿ ನಾನು ನನಗೆ ಅವಕಾಶ ನೀಡಿದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರ್ ಅವರಿಗೆ, ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ನನ್ನ ಸಹ ಕಲಾವಿದರ ಹಾಗೂ ತಂತ್ರಜ್ಞರ ಪ್ರೋತ್ಸಾಹವನ್ನು ಈ ಸಮಯದಲ್ಲಿ ನೆನೆಯುತ್ತೇನೆ. ಮೊದಲ ಚಿತ್ರದಲ್ಲಿ ನನ್ನಿಂದೇನಾದರೂ ಸಣ್ಣಪುಟ್ಟ ತಪ್ಪಾಗಿದ್ದರೆ ಮುಂದಿನ ಚಿತ್ರಗಳಲ್ಲಿ ಸರಿ ಪಡಿಸಿಕೊಳ್ಳುತ್ತೇನೆ. ಜನ ಫ್ಯಾಮಿಲಿ ಸಮೇತ ಬಂದು ಚಿತ್ರವನ್ನು ನೋಡುತ್ತಿರುವುದು ಬಹಳ ಖುಷಿಯಾಗಿದೆ. ಈ ಮೂಲಕ ರಾಜ್ಯದ ಜನತೆಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು.

Yuva 3

ನನ್ನ ಮಗನ ಮೊದಲ ಚಿತ್ರವನ್ನು  ನಿರ್ಮಾಣ ಮಾಡಿದ ಹೊಂಬಾಳೆ ಸಂಸ್ಥೆಗೆ ಮೊದಲು ಧನ್ಯವಾದ ಹೇಳುತ್ತೇನೆ. ನಂತರ ನನ್ನ ಮಗನ ಒಂದು ಬ್ರಾಂಡ್ ಗೆ ಸೀಮಿತ ಮಾಡದೆ ಎಲ್ಲಾ ರೀತಿಯ ನಟನೆಯನ್ನು ಅವನಿಂದ ಎಲ್ಲಾ ರೀತಿಯ ನಟನೆಯನ್ನು ಮಾಡಿಸಿರುವ ನಿರ್ದೇಶಕ ಸಂತೋಷ್ ಆನಂದರಾಮ್ ಅವರಿಗೂ ಧನ್ಯವಾದ ಹೇಳುತ್ತಾ, ಯುವನ ಸಿನಿಮಾ ಹಾದಿ ಈಗಷ್ಟೇ ಆರಂಭವಾಗಿದೆ. ‌ಮುಂದೆ ಬೇರೆಬೇರೆ ಪಾತ್ರಗಳಲ್ಲಿ ಅವನು ನಟಿಸಿ ಜನರಿಂದ ಸೈ ಎನಿಸಿಕೊಳ್ಳಬೇಕು ಎಂದು ರಾಘವೇಂದ್ರ ರಾಜಕುಮಾರ್ ತಿಳಿಸಿದರು.

ಒಳ್ಳೆಯ ಪಾತ್ರ ನೀಡಿದ್ದಕ್ಕೆ ನಾಯಕಿ ಸಪ್ತಮಿ ಗೌಡ ನಿರ್ಮಾಪಕರಿಗೆ ಹಾಗೂ ನಿರ್ದೇಶಕರಿಗೆ ಧನ್ಯವಾದ ಹೇಳಿದರು ಚಿತ್ರದಲ್ಲಿ ಅಭಿನಯಿಸಿರುವ ಅಚ್ಯುತಕುಮಾರ್, ಸುಧಾರಾಣಿ, ಗೋಪಾಲಕೃಷ್ಣ ದೇಶಪಾಂಡೆ, ರವಿಶಂಕರ್ ಗೌಡ, ರಾಘು ಶಿವಮೊಗ್ಗ ಹಾಗೂ ಛಾಯಾಗ್ರಾಹಕ ಶ್ರೀಶ ಕುದುವಳ್ಳಿ “ಯುವ” ಚಿತ್ರದ ಗೆಲುವನ್ನು ‌ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.

TAGGED:Kichcha SudeepYuvaYuvaraj Kumarಕಿಚ್ಚ ಸುದೀಪ್ಯುವಯುವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema news

Gilli Kavya 2
ಕಾವ್ಯನ ಅಳಿಸೋಕೆ ಊಟಾ ಬಿಟ್ರಾ ಗಿಲ್ಲಿ – ಭಾವನೆಗೆ ಬೆಲೆ ಇಲ್ಲಾ ಅಂತೀರಾ?
Cinema Latest Sandalwood Top Stories
Kavya Vs Rakshita
ಕಾವ್ಯ Vs ರಕ್ಷಿತಾ| ಅಮಾಯಕಿಯಂತೆ ನಾಟಕ – ರಿಯಲ್‌ ಕನ್ನಿಂಗ್‌ ನೀವು
Cinema Latest Top Stories TV Shows
The Devil
ʻದಿ ಡೆವಿಲ್‌ʼ ರಿಲೀಸ್‌ಗೆ ಕ್ಷಣಗಣನೆ – ಪ್ರೀತಿಯ ಸೆಲೆಬ್ರಿಟಿಸ್‌ಗೆ ಜೈಲಿಂದಲೇ ʻದಾಸʼನ ಸಂದೇಶ; ಪತ್ರದಲ್ಲಿ ಏನಿದೆ?
Cinema Latest Sandalwood Top Stories
Mahakavi Movies 2
ಬರಗೂರರ 25ನೇ ಸಿನಿಮಾ ‘ಮಹಾಕವಿ’ ಶೂಟಿಂಗ್ ಮುಕ್ತಾಯ
Cinema Latest Sandalwood

You Might Also Like

01 4
Belgaum

Video | ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಪುಟ ಅಸ್ತು!

Public TV
By Public TV
2 hours ago
RCB Team
Bengaluru City

IPL 2026 | ಗುಡ್‌ನ್ಯೂಸ್‌; ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ಕ್ರಿಕೆಟ್‌ ಪಂದ್ಯ ನಡೆಸಲು ಸಂಪುಟ ಗ್ರೀನ್‌ ಸಿಗ್ನಲ್‌

Public TV
By Public TV
2 hours ago
Tilak Varma
Cricket

ಕಳಪೆ ಬೌಲಿಂಗ್‌ – ಭಾರತಕ್ಕೆ ಹೀನಾಯ ಸೋಲು, ಆಫ್ರಿಕಾಗೆ 51 ರನ್‌ಗಳ ಭರ್ಜರಿ ಗೆಲುವು

Public TV
By Public TV
2 hours ago
Chinnaswamy Stadium
Bengaluru City

IPL 2026 | RCB ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಗುತ್ತಾ? – ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಮತ್ತೆ ಮ್ಯಾಚ್ ನಡೆಯುತ್ತಾ?

Public TV
By Public TV
3 hours ago
Dinesh Gundu Rao
Belgaum

ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು, ನರ್ಸ್, ಫಾರ್ಮಸಿಸ್ಟ್ ಹುದ್ದೆಗಳನ್ನು ತಿಂಗಳೊಳಗೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್

Public TV
By Public TV
3 hours ago
Cotton 2
Districts

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ – ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಭಸ್ಮ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?