ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ರಾಜಕೀಯ ಕಣಕ್ಕೆ ಇಳಿದಿರುವ ಸುದೀಪ್ (Kiccha Sudeep), ಅನೇಕರಿಂದ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಮತ್ತೊಂದು ಕಡೆ ಖಾಸಗಿ ವಿಡಿಯೋ ಹರಿಬಿಡುವುದಾಗಿ ಬೆದರಿಕೆ. ಈ ಎಲ್ಲದರ ನಡುವೆ ಸುದೀಪ್ ತಣ್ಣಗೆ ಚಿತ್ರೀಕರಣ (Shooting) ಸ್ಥಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪ್ರದೀಪ್ ಯಾದವ್ ನಿರ್ಮಾಣದ ಹಾಗೂ ಸಿ.ಎಂ ವಿಜಯ್ ನಿರ್ದೇಶನದ ‘ಉಸಿರೇ ಉಸಿರೇ’ (Usire Usire) ಚಿತ್ರದಲ್ಲಿ ಕಿಚ್ಚ ಸುದೀಪ್ ಅಭಿನಯಿಸುತ್ತಿದ್ದಾರೆ.
ಈಗಾಗಲೇ ‘ಉಸಿರೇ ಉಸಿರೇ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಚಿತ್ರದ ಪ್ರಮುಖ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ನಟಿಸುತ್ತಿದ್ದಾರೆ. ಕೊನೆಯ ಹಂತದ ಚಿತ್ರೀಕರಣದಲ್ಲಿ ಅವರು ಭಾಗಿಯಾಗಿ ತಮ್ಮ ಭಾಗದ ಚಿತ್ರೀಕರಣವನ್ನು ಮುಗಿಸಲಿದ್ದಾರೆ. ಇದನ್ನೂ ಓದಿ: ‘ವಿಷ್ಣುಪ್ರಿಯಾ’ಗಾಗಿ ಕೇರಳದಿಂದ ಹಾರಿಬಂದ ಕಣ್ಸನ್ನೆ ಬೆಡಗಿ ಪ್ರಿಯಾ
ಬಿಗ್ ಬಾಸ್ ಖ್ಯಾತಿಯ ರಾಜೀವ್ (Rajeev) ಈ ಚಿತ್ರದ ನಾಯಕ. ಶ್ರೀಜಿತ ನಾಯಕಿ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ,ಆಲಿ, ಬ್ರಹ್ಮಾನಂದಂ, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಜಗಪ್ಪ, ಶಿವು, ಸುಶ್ಮಿತಾ ಮುಂತಾದವರು ತಾರಾಬಳಗದಲ್ಲಿದ್ದಾರೆ. ಕಿಚ್ಚ ಸುದೀಪ್ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಸಿ.ಎಂ.ವಿಜಯ್ ನಿರ್ದೇಶನದ ಈ ಚಿತ್ರಕ್ಕೆ ಮನು ಬಿ ಕೆ ಛಾಯಾಗ್ರಹಣ, ಕೆ ಎಂ ಪ್ರಕಾಶ್ ಸಂಕಲನ, ಟೈಗರ್ ಶಿವು ಸಾಹಸ ನಿರ್ದೇಶನ ಹಾಗೂ ಮೋಹನ್ ಮತ್ತು ಹೈಟ್ ಮಂಜು ಅವರ ನೃತ್ಯ ನಿರ್ದೇಶನವಿದೆ ವಿವೇಕ್ ಚಕ್ರವರ್ತಿ ಅವರ ಸಂಗೀತ ನಿರ್ದೇಶನ ‘ಉಸಿರೇ ಉಸಿರೇ’ ಚಿತ್ರಕ್ಕಿದೆ.