ವಿಷ್ಣುವರ್ಧನ್ ಪುಣ್ಯಭೂಮಿ ಉಳಿವಿನ ಹೋರಾಟಕ್ಕೆ ಕಿಚ್ಚನ ಬೆಂಬಲ

Public TV
1 Min Read
vishnuvardhan with sudeep

ನ್ನಡ ಸಿನಿಮಾ ರಂಗದ ಹೆಸರಾಂತ ನಟ ವಿಷ್ಣುವರ್ಧನ್ (Vishnuvardhan) ಅವರ ಸಮಾಧಿ ಜಾಗವನ್ನುಉಳಿಸಿಕೊಳ್ಳುವ ನಿಟ್ಟಿನಲ್ಲಿ ಡಾ.ವಿಷ್ಣು ಸೇನಾ ಸಮಿತಿಯು ವೀರಕಪುತ್ರ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಡಿ.17ರಂದು ಬೃಹತ್ ಹೋರಾಟವನ್ನು ಹಮ್ಮಿಕೊಂಡಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಂದು ಡಾ.ವಿಷ್ಣು ಸೇನಾ ಸಮಿತಿಯ ಸದಸ್ಯರು ಮತ್ತು ವಿಷ್ಣುವರ್ಧನ್ ಅವರ ಅಭಿಮಾನಿಗಳು ಹೋರಾಟದಲ್ಲಿ ಭಾಗಿಯಾಗಲಿದ್ದಾರೆ.

veerakaputra srinivasa

ಈ ಹೋರಾಟಕ್ಕೆ ಈಗಾಗಲೇ ಬಹುತೇಕ ಕನ್ನಡಪರ ಸಂಘಟನೆ ಬೆಂಬಲ ಸೂಚಿಸಿವೆ. ಜೊತೆಗೆ ನಾನಾ ಸಂಘಟನೆಗಳು ಕೈ ಜೋಡಿಸಿವೆ. ಇದೀಗ ಕಿಚ್ಚ ಸುದೀಪ್ ಕೂಡ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ ಎಂದು ವಿಷ್ಣುಸೇನಾ ಸಮಿತಿ ವೀರಕಪುತ್ರ ಶ್ರೀನಿವಾಸ್ (Veerakaputra Srinivas)  ಅವರು ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ಹೋರಾಟಕ್ಕೆ ಕಿಚ್ಚ (Kiccha Sudeep) ಬೆಂಬಲ ನೀಡಿರುವುದಾಗಿ ತಿಳಿಸಿದ್ದಾರೆ.

Vishnuvardhan 3

ಪುಣ್ಯಭೂಮಿ ಉಳಿಸಿಕೊಳ್ಳಲು ಏನೆಲ್ಲಾ ಮಾಡಬಹುದೋ ಅದೆಲ್ಲವನ್ನೂ ಮಾಡುವೆ. ನಾನೂ ನಿಮ್ಮಲ್ಲೊಬ್ಬ ಎಂದು ಭಾವಿಸಿ ಮುನ್ನೆಡೆಯಿರಿ ಎಂದು ಸುದೀಪ್ ಹೇಳಿರುವುದಾಗಿ ವೀರಕಪುತ್ರ ಶ್ರೀನಿವಾಸ್ ಬರೆದುಕೊಂಡಿದ್ದಾರೆ. ನಮ್ಮ ಬೇಡಿಕೆ ನ್ಯಾಯವಿದ್ದಾಗ ಜಗವೂ ನ್ಯಾಯದ ಪರವೇ ನಿಲ್ಲುತ್ತದೆ ಎನ್ನುವ ಆತ್ಮವಿಶ್ವಾಸದ ಪದಗಳನ್ನು ಅವರು ಬರೆದುಕೊಂಡಿದ್ದಾರೆ.

 

ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸಮಾಧಿಯನ್ನು ನೆಲಸಮ ಮಾಡುವ ಹುನ್ನಾರ ನಡೆದಿದೆ ಎಂದು ವಿಷ್ಣು ಸೇನಾ ಸಮಿತಿ ಆರೋಪಿಸಿದೆ. ಇದರ ವಿರುದ್ಧವೇ ಅವರು ಪ್ರತಿಭಟನೆಗೆ ಮುಂದಾಗಿದ್ದಾರೆ. ರವಿವಾರದಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನೂ ಹಮ್ಮಿಕೊಂಡಿದ್ದಾರೆ. ಈ ಮೂಲಕ ಸರಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ಕಿಚ್ಚನ ಬೆಂಬಲ ಆನೆ ಬಲ ಬಂದಂತಾಗಿದೆ.

Share This Article