ಮೈಸೂರು: ಮಗನ ಪೆನ್‍ಡ್ರೈವ್ ಪ್ರಕರಣದಿಂದ ಆರಂಭವಾಗಿ ಇದೀಗ ಅಪ್ಪನಿಗೂ ಸಂಕಷ್ಟ ಎದುರಾಗಿದೆ. ಪೆನ್‍ಡ್ರೈವ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ (H.D Revanna) ವಿರುದ್ಧ ಇದೀಗ ಮತ್ತೊಂದು ದೂರು ದಾಖಲಾಗಿದೆ.
ಎಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿದೆ. ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದೆ. ಹೀಗಾಗಿ ಇದೀಗ ರೇವಣ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಪೆನ್‌ಡ್ರೈವ್ ಪ್ರಕರಣ ಸದ್ದು ಮಾಡ್ತಿದ್ದಂತೇ ಅಭಿಮಾನಿಯಿಂದ ಪ್ರಜ್ವಲ್‌ಗೆ ಗೆಲುವಿನ ಶುಭಾಶಯ!
Advertisement
Advertisement
ಸಂತ್ರಸ್ತೆ ಪುತ್ರ ರೇವಣ್ಣ ಹಾಗೂ ಸತೀಶ್ ಬಾಬಣ್ಣ ಎಂಬಿಬ್ಬರ ವಿರುದ್ಧ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಭವಾನಿ ಅಕ್ಕ ಕರೆಯುತ್ತಿದ್ದಾರೆ ಅಂತ ಬಾಬಣ್ಣ ಎಂಬಾತ ಮನೆಗೆ ಬಂದು ನನ್ನ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ. ಅಂದಿನಿಂದ ನನ್ನ ತಾಯಿ ನಾಪತ್ತೆಯಾಗಿದ್ದಾರೆ . ಪೊಲೀಸರು ಕೇಳಿದರೆ ನಮಗೇನು ಗೊತ್ತಿಲ್ಲ ಎಂದು ಹೇಳಿದ್ರು. ಬಳಿಕ ಪೊಲೀಸರ ಮೇಲೆಯೂ ಒತ್ತಡ ಹಾಕಿದ್ರು ಅಂತ ದೂರಿನಲ್ಲಿ ತಿಳಿಸಿದ್ದಾರೆ.
Advertisement
Advertisement
ಈಗಾಗಲೇ ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹೆಚ್.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು ಬೆಳಗ್ಗೆ 11:30ಕ್ಕೆ ಈ ಅರ್ಜಿಯ ವಿಚಾರಣೆ ನಡೆಸಲಿದೆ. ಇತ್ತ ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಅರ್ಜಿಯನ್ನು ಎಸ್‍ಐಟಿ ಸಲ್ಲಿಕೆ ಮಾಡಿದೆ. ಒಟ್ಟಿನಲ್ಲಿ ಇಂದು ರೇವಣ್ಣಗೆ ನಿರೀಕ್ಷಣಾ ಜಾಮೀನು ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.