ಶಿವಮೊಗ್ಗ: ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ ಮಗನನ್ನು ಅಪಹರಿಸಿ, ನದಿಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ (Shivamogga) ನ್ಯಾಯಾಲಯ (Court) ಜೀವಾವಧಿ ಶಿಕ್ಷೆ (Life Imprisonment) ಮತ್ತು 3.25 ಲಕ್ಷ ರೂ. ದಂಡ (Penalty) ವಿಧಿಸಿದೆ.
ಜಿಲ್ಲೆಯ ಶಿಕಾರಿಪುರ (Shikaripura) ತಾಲೂಕಿನ ಚುರ್ಚಿಗುಂಡಿ ಗ್ರಾಮದ ಎನ್‌ಎಂ ಬಸವರಾಜಪ್ಪ (40) ಶಿಕ್ಷೆಗೆ ಒಳಗಾದ ಅಪರಾಧಿ. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ ಹಳೇ ದ್ವೇಷಕ್ಕೆ (Feud) ಆತನ ಮಗ ಪ್ರೇಮ್ ಕುಮಾರ್‌ನನ್ನು (8) ಬಸವರಾಜಪ್ಪ ಅಪಹರಣ (Kidnap) ಮಾಡಿದ್ದ. 2017ರ ಮಾರ್ಚ್ 2 ರಂದು ಆಳ್ಕೊಳ ಸರ್ಕಲ್‌ನಿಂದ ಅಪಹರಣ ಮಾಡಿ, ಚುರ್ಚಿಗುಂಡಿ ಹತ್ತಿರ ಕುಮದ್ವತಿ ನದಿ ಬಳಿ ಕರೆದೊಯ್ದು ನೀರಿನಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ ನ್ಯಾಯಾಂಗ ಬಂಧನ
Advertisement
Advertisement
ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು. ದೊಡ್ಡಪೇಟೆ ಠಾಣೆ ಇನ್ಸ್ಪೆಕ್ಟರ್ ಕೆಟಿ ಗುರುರಾಜ್ ಪ್ರಕರಣದ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಲ್ಲದೇ ಆತನ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದನ್ನೂ ಓದಿ: ವಿಪಕ್ಷಗಳ ಮೈತ್ರಿಯಲ್ಲಿರುವ INDIA ಹೆಸರನ್ನು ನಿರ್ಬಂಧಿಸಿ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ
Advertisement
Advertisement
ಸರ್ಕಾರದ ಪರವಾಗಿ ವಕೀಲೆ ಪುಷ್ಪಾ ವಾದ ಮಂಡಿಸಿದ್ದು, ವಿಚಾರಣೆ ನಡೆಸಿದ ಬಳಿಕ ನ್ಯಾಯಾಧೀಶೆ ಬಿಆರ್ ಪಲ್ಲವಿ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಇದನ್ನೂ ಓದಿ: ಭಾಷಣದಲ್ಲಿ ಮತದಾರರಿಗೆ ಆಮಿಷ – ಜೆಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ರದ್ದು
Web Stories