ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣ (Renukaswamy Murder Case) ಮತ್ತೊಂದು ರೋಚಕ ತಿರುವು ಪಡೆದಿದೆ. ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ (Pavithra Gowda) ಅವರ ಪಾತ್ರವೇ ಇಲ್ಲ ಎಂದು ವಕೀಲರು ವಾದ ಮಂಡಿಸಿದ್ದಾರೆ.
ಪವಿತ್ರಾ ಗೌಡ ಹೈಕೋರ್ಟ್‌ನಲ್ಲಿ (High Court) ವಾದ ಮಂಡಿಸಿದ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್, ಪವಿತ್ರಗೌಡ- ದರ್ಶನ್ ಲೀವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದರು. ಪವಿತ್ರಾಗೌಡ ಮನೆಯಲ್ಲಿ ಪವನ್ ಕೆಲಸಕ್ಕೆ ಇದ್ದ. ದರ್ಶನ್ ಸೂಚನೆಯ ಮೇರೆಗೆ ಪವನ್ ಕಿಡ್ನಾಪ್ ಮಾಡಿದ್ದಾನೆ ಎಂದು ವಾದಿಸಿದ್ದಾರೆ.
Advertisement
Advertisement
ರೇಣುಕಾಸ್ವಾಮಿ ಬರುವ ತನಕ ಶೆಡ್‌ನಲ್ಲಿ ಪವನ್ ಕಾದಿದ್ದ. ದರ್ಶನ್ (Darshan) ಶೆಡ್‌ಗೆ ಹೋಗುವಾಗ ಪವಿತ್ರ ಗೌಡಳನ್ನು ಕರೆದುಕೊಂಡು ಹೋಗಿದ್ದಾರೆ. ಪವಿತ್ರಾಗೌಡ ಶೆಡ್‌ಗೆ ಹೋಗಿ ರೇಣುಕಾಸ್ವಾಮಿಗೆ ಬೈಯ್ದು ವಾಪಸ್ ಮನೆಗೆ ಬಂದಿದ್ದಾರೆ. ಆದರೆ ಪಟ್ಟಣಗೆರೆ ಶೆಡ್‌ನಲ್ಲಿ ಹಲ್ಲೆ ಮಾಡಿದಾಗ ರೇಣುಕಾಸ್ವಾಮಿ ಸಾವು ಸಂಭವಿಸಿರಬಹುದು ಎಂದು ಹೇಳಿದರು. ಇದನ್ನೂ ಓದಿ: BBK 11: ಬಿಗ್ ಬಾಸ್‌ನಿಂದ ಹೊರಬಂದ ಚೈತ್ರಾ ಕುಂದಾಪುರ
Advertisement
ಪವಿತ್ರಾಗೌಡ ಚಪ್ಪಲಿಯಿಂದ ಹೊಡೆದಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗಿದೆ. ಆದರೆ ಚಪ್ಪಲಿಯಿಂದ ಹೊಡೆದಿರುವುದು ರೇಣುಕಾಸ್ವಾಮಿ ಸಾವಿಗೆ ಕಾರಣ ಅಲ್ಲ. ನನ್ನ ಕಕ್ಷಿದಾರರಿಗೆ ಅಪ್ರಾಪ್ತ ಮಗಳಿದ್ದಾಳೆ. ಇದನ್ನೆಲ್ಲಾ ಪರಿಗಣಿಸಿ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.
Advertisement
ಜಾಮೀನು ಅರ್ಜಿಯ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆಯಾಗಿದ್ದು ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್ ಪ್ರತಿವಾದ ಮಂಡಿಸಲಿದ್ದಾರೆ.