ಕೋಲಾರ: ಅನಾರೋಗ್ಯ ಪೀಡಿತ ವ್ಯಕ್ತಿಯೋರ್ವ ಚಲಿಸುವ ರೈಲಿಗೆ (Train) ಹಾರಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarpet) ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಹುಣಸನಹಳ್ಳಿ ನಿವಾಸಿ ಮುನಿರಾಜು ಅಲಿಯಾಸ್ ಪುಟ್ಟಣ್ಣ (56) ಚಲಿಸುವ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು
ಮೃತ ಮುನಿರಾಜು ವೃತ್ತಿಯಲ್ಲಿ ಮರಗೆಲಸ ಮಾಡಿ ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ. ಹಲವು ತಿಂಗಳುಗಳಿಂದ ಅನಾರೋಗ್ಯ ಭಾದಿತರಾಗಿದ್ದ ಇವರು 2 ಕಿಡ್ನಿ ವೈಫಲ್ಯವಾಗಿ (Kidney Failure) ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರೆಂದು ಕುಟುಂಬಸ್ಥರು ತಿಳಿಸಿದ್ದಾರೆ. ದಿನಗಳು ಕಳೆದಂತೆ ಆರೋಗ್ಯದ ಸ್ಥಿತಿ ಚಿಂತಾಜನಕವಾಗಿದ್ದು, ಚೇತರಿಸಿಕೊಳ್ಳಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕಲ್ಲಿನಿಂದ ಹೊಡೆದು ಯುವಕನ ಹತ್ಯೆಗೈದ ದುಷ್ಕರ್ಮಿಗಳು – ಸಿಸಿ ಟಿವಿಯಲ್ಲಿ ಕೃತ್ಯ ಸೆರೆ
ಚಲಿಸುವ ರೈಲಿಗೆ ಎದೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಪರಿಣಾಮ ರೈಲು ಡಿಕ್ಕಿಯಾದ ರಭಸಕ್ಕೆ ಅವರ ದೇಹ ಛಿದ್ರ ಛಿದ್ರವಾಗಿದ್ದು, ರೈಲು ಹಳಿಗಳ ಮೇಲೆ ದೇಹದ ಭಾಗಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದೆ. ಮೃತರಿಗೆ ಪತ್ನಿ ಹಾಗು ಮೂವರು ಮಕ್ಕಳಿದ್ದಾರೆ. ಬಂಗಾರಪೇಟೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಜರುಗಿಸಲಾಗಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ರೈಲಿಗೆ ಬೆಂಕಿ ಆಕಸ್ಮಿಕ ಅಲ್ಲ, ಮಾನವ ಕೃತ್ಯದ ಶಂಕೆ
Web Stories