ಮೈಸೂರು: ಆದಿವಾಸಿಗಳ ಒತ್ತಡಕ್ಕೆ ಮಣಿದು ಮೂವರನ್ನು ಬಲಿ ಪಡೆದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಲ್ಲಿ 30 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಶಾರ್ಪ್ ಶೂಟರ್ಸ್ ನಿಂದ ಅರೆವಳಿಕೆ ಚುಚ್ಚುಮದ್ದು ನೀಡಿ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲಾಗಿದೆ. ಈ ಹುಲಿ ಒಂದು ತಿಂಗಳಲ್ಲಿ ಮೂವರನ್ನ ಕೊಂದಿತ್ತು. ಇಂದು ಇಲಾಖೆಯ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿ ಹುಲಿಯನ್ನ ಸೆರೆ ಹಿಡಿದಿದ್ದಾರೆ. ಹುಲಿ ಸೆರೆ ಹಿಡಿಯಲು ಬೆಂಗಳೂರಿನಿಂದ ಶಾರ್ಪ್ ಶೂಟರ್ಸ್ ಗಳು ಬಂದಿದ್ದರು. ಈಗ ಅವರೇ ಹುಲಿಗೆ ಅರವಳಿಕೆ ಚುಚ್ಚುಮದ್ದು ನೀಡಿ ಸೆರೆ ಹಿಡಿದಿದ್ದಾರೆ.
Advertisement
Advertisement
ಅರಣ್ಯ ಇಲಾಖೆಯ ಸಿಸಿಎಫ್ ನಾರಾಯಣಸ್ವಾಮಿ ನೇತೃತ್ವದಲ್ಲಿ ಆಪರೇಷನ್ ನರಭಕ್ಷಕ ಕಾರ್ಯಾಚರಣೆ ನಡೆದಿದ್ದು, ಮೂರು ಮಂದಿ ಆದಿವಾಸಿಗಳ ಬಲಿ ಪಡೆದಿರುವ ಹುಲಿಯನ್ನು ಸೆರೆ ಹಿಡಿಯಲು ಸುಮಾರು 30 ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದರು. ಕೊನೆಗೂ ಅವರ ಕಾರ್ಯಾಚರಣೆ ಯಶಸ್ವಿಯಾಗಿದೆ.
Advertisement
ಒಂದು ತಿಂಗಳ ಹಿಂದೆ ಮಾನಿಮೂಲೆ ಹಾಡಿಯ ಜೆಡಿಯಾ, ಕಳೆದ ವಾರದ ಹುಲ್ಲುಮಟ್ಲು ಗ್ರಾಮದ ಚಿನ್ನಪ್ಪ ಹಾಗೂ ನಿನ್ನೆ ಹೊಸತಿಪ್ಪೂರಿನ ಕಡ್ಡಿ ಎಂಬವರನ್ನು ಹುಲಿ ಬಲಿ ಪಡೆದಿತ್ತು. ಆದ್ದರಿಂದ ಎಚ್.ಡಿ ಕೋಟೆ ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಬೀಡುಬಿಟ್ಟಿರುವ ಅರಣ್ಯ ಇಲಾಖೆ ಸಿಬ್ಬಂದಿ ಚುರುಕಾಗಿ ಕಾರ್ಯಾಚರಣೆ ಮಾಡಿ ನರಭಕ್ಷಕ ಹುಲಿಯನ್ನು ಸೆರೆಹಿಡಿದಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv