ಶಿವಮೊಗ್ಗ: ಜ್ಞಾನೇಂದ್ರ ಅವರು ಕೇವಲ ತೀರ್ಥಹಳ್ಳಿಗೆ ಮಾತ್ರ ಗೃಹ ಸಚಿವರಾಗಿದ್ದು, ಇಡೀ ರಾಜ್ಯಕ್ಕೆ ಗೃಹ ಮಂತ್ರಿಯಲ್ಲ ಎಂದು ಮಾಜಿ ಸಚಿವ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.
Advertisement
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜ್ಞಾನೇಂದ್ರ ಅವರು ಗೃಹ ಸಚಿವರಾದಾಗ ನಾನು ಸಹ ಅವರಿಗೆ ಶುಭ ಹಾರೈಸಿದ್ದೆ. ನಾಲ್ಕು ಬಾರಿ ಶಾಸಕರಾಗಿದ್ದಾರೆ, ಸಮರ್ಥರಿದ್ದಾರೆ ಅಂದುಕೊಂಡಿದ್ದೆ. ಆದರೆ ಅವರು ನೀಡಬೇಕಾದ ಹೇಳಿಕೆಯನ್ನು ಮುಖ್ಯಮಂತ್ರಿಗಳು, ಸಚಿವ ಸುಧಾಕರ್ ಅವರು ನೀಡುತ್ತಿದ್ದಾರೆ. ಗೃಹ ಸಚಿವರಾದ ಬಳಿಕ ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಎಲ್ಲರೂ ಗೃಹ ಸಚಿವರಾಗಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ
Advertisement
ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ವಿನಾ: ಕಾರಣ ಕ್ರಿಮಿನಲ್ ಕೇಸ್ ಹಾಕಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತರು ಅಧಿಕಾರಿಗಳನ್ನು ಹೆದರಿಸಿಕೊಂಡು ಅಕ್ರಮ ಮರಳುಗಾರಿಕೆಯಲ್ಲಿ ತೊಡಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.