ಹುಬ್ಬಳ್ಳಿ: ಕೋವಿಡ್ ರೂಪಾಂತರಿ ಓಮಿಕ್ರಾನ್ ಭೀತಿ ಸೃಷ್ಟಿಸಿರುವ ಸಂದರ್ಭದಲ್ಲಿ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಪ್ರತಿಭಟನೆ ನಡೆಸಿದ್ದಾರೆ.
Advertisement
ಕಿಮ್ಸ್ ಆಸ್ಪತ್ರೆಯ ಎದುರು ಪ್ರತಿಭಟನೆ ನಡೆಸುತ್ತಿರುವ ವೈದ್ಯರು, 6 ತಿಂಗಳ ಕೋವಿಡ್ ಭತ್ಯೆ ನೀಡಬೇಕು. ಸರ್ಕಾರ ಪ್ರತಿ ತಿಂಗಳು 10 ಸಾವಿರ ರೂಪಾಯಿಯಂತೆ ಒಟ್ಟು 60 ಸಾವಿರ ರೂಪಾಯಿ ಭತ್ಯೆಯನ್ನು ಕೂಡಲೇ ಬಿಡುಗಡೆ ಮಾಡಬೇಕು. ಜೊತೆಗೆ ಕೌನ್ಸಿಲಿಂಗ್ ನಡೆಸಿ, ಸ್ನಾತಕೋತ್ತರ ಶುಲ್ಕ ಇಳಿಕೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಯಾವಾಗ ಕುಡಿತಾರೋ, ಯಾವಾಗ ಕುಡಿಯಲ್ಲೊ ಗೊತ್ತಿಲ್ಲ: ಕೆ.ಎಸ್.ಈಶ್ವರಪ್ಪ
Advertisement
ರಾಜ್ಯ ಸರ್ಕಾರ ಆರು ತಿಂಗಳು ಕಳೆದರೂ ಕೋವಿಡ್ ಭತ್ಯ ನೀಡಿಲ್ಲ, ಶುಲ್ಕ ಕಡಿಮೆ ಮಾಡಿಲ್ಲ. ಸಚಿವ ಸುಧಾಕರ್ ಅವರು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಈವರೆಗೂ ಬೇಡಿಕೆ ಈಡೇರಿಸಿಲ್ಲ. ಹೀಗಾಗಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಇಂದು ಮತ್ತು ನಾಳೆ ಓಪಿಡಿ ಬಂದ್ ಮಾಡಿ ಪ್ರತಿಭಡನೆ ನಡೆಸಲಾಗುವುದು. ಸರ್ಕಾರ ಸ್ಪಂದಿಸದಿದ್ದರೇ ತುರ್ತು ಚಿಕಿತ್ಸಾ ವಿಭಾಗದ ಸೇವೆಯನ್ನೂ ಸ್ಥಗಿತಗೊಳಿಸಿ ಉಗ್ರ ಹೋರಾಟ ಮಾಡುವುದಾಗಿ ಪಿಜಿ ವೈದ್ಯರು ಹಾಗೂ ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕೇರಳದಿಂದ ಬಂದ 15 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕ್ವಾರಂಟೈನ್
Advertisement
Advertisement
ಕೋವಿಡ್ ಹೊಸ ತಳಿ ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದ್ದು, ಎಲ್ಲೆಡೆ ಮುಂಜಾಗ್ರತೆ ವಹಿಸಲಾಗಿದೆ. ಆಸ್ಪತ್ರೆಗಳಲ್ಲಿ ರೋಗಿಗಳ ಬಗ್ಗೆ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ. ಇದರ ನಡುವೆಯೇ ವೈದ್ಯರು ಓಪಿಡಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವುದು ರೋಗಿಗಳಲ್ಲಿ ಆತಂಕ ಹೆಚ್ಚಿಸಿದೆ.