ಹಾಸನ: ಸಕಲೇಶಪುರ ತಾಲೂಕಿನ ಚಗಳ್ಳಿ ಗ್ರಾಮದ ತೋಟವೊಂದರ ಪಂಪ್ ಹೌಸ್‍ನಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿದೆ.
ಚಗಳ್ಳಿ ಗ್ರಾಮದ ಶ್ರೀನಿವಾಸ್ ಎಂಬುವವರ ತೋಟದ ಪಂಪ್ ಹೌಸ್‍ನಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಇಂದು ಬೆಳಗ್ಗೆ ಶ್ರೀನಿವಾಸ್ ತಮ್ಮ ತೋಟಕ್ಕೆ ನೀರು ಬಿಡಲು ಪಂಪ್ ಹೌಸ್ ಬಳಿ ಹೋದಾಗ ಕಾಳಿಂಗ ಸರ್ಪವನ್ನು ಕಂಡು ಭಯಗೊಂಡಿದ್ದಾರೆ. ತಕ್ಷಣ ಉರಗ ತಜ್ಞ ಶೇಕ್ ಅವರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಶೇಕ್ ಅವರು 10 ಅಡಿ ಉದ್ದದ ಸರ್ಪವನ್ನು ಸುರಕ್ಷಿತವಾಗಿ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.
Advertisement
Advertisement
ಈ ವೇಳೆ ಉರಗ ತಜ್ಞರು ಹಾವನ್ನು ಹಿಡಿಯುವ ದೃಶ್ಯಾವಳಿಗಳನ್ನು ಕೆಲ ಸ್ಥಳೀಯರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದರೆ.
Advertisement
ಸದ್ಯ ಸೆರೆಸಿಕ್ಕ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದ್ದು, ಸರ್ಪವನ್ನು ಗುಂಡ್ಯ ಅರಣ್ಯಕ್ಕೆ ಬಿಡಲು ನಿರ್ಧರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv