ಕನ್ನಡತಿ ಶ್ರೀಲೀಲಾಗೆ (Sreeleela) ಸೌತ್‌ನಲ್ಲಿ ಭಾರೀ ಬೇಡಿಕೆಯಿದೆ. ಇದೀಗ 3 ವರ್ಷಗಳ ಬಳಿಕ ಕನ್ನಡಕ್ಕೆ ಶ್ರೀಲೀಲಾ ಬರುತ್ತಿದ್ದಾರೆ. ಜನಾರ್ದನ ರೆಡ್ಡಿ ಮಗ ಕಿರೀಟಿಗೆ ನಾಯಕಿಯಾಗಿ ‘ಜೂನಿಯರ್’ (Junior) ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾದ ಮೊದಲ ಸಾಂಗ್ ರಿಲೀಸ್ ಆಗಿದೆ. ರೆಡ್ಡಿ ಮಗನೊಂದಿಗೆ ನಟಿ ಡ್ಯುಯೆಟ್ ಹಾಡಿದ್ದಾರೆ. ಇದನ್ನೂ ಓದಿ:ಗೃಹಪ್ರವೇಶದ ಸಂಭ್ರಮದಲ್ಲಿ ‘ಪುಷ್ಪ-2’ ನಟಿ ಅನಸೂಯ
View this post on Instagram
ಇಂದು (ಮೇ 19) ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಸಾಂಗ್ ರಿಲೀಸ್ ಕಾರ್ಯಕ್ರಮ ಜರುಗಿದೆ. ‘ಲೆಟ್ಸ್ ಲಿವ್ ದಿ ಮೂಮೆಂಟ್’ ಎಂಬ ರೊಮ್ಯಾಂಟಿಕ್ ಸಾಂಗ್ ಕನ್ನಡ ಸೇರಿದಂತೆ ಬಹುಭಾಷೆಗಳಲ್ಲಿ ರಿಲೀಸ್ ಆಗಿದೆ. ಮಸ್ತ್ ಆಗಿ ಕಿರೀಟಿ ಜೊತೆ ನಟಿ ಕುಣಿದು ಕುಪ್ಪಳಿಸಿದ್ದಾರೆ. ಈ ಹಾಡಿಗೆ ಅಭಿಮಾನಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದೇ ಜುಲೈ 18ಕ್ಕೆ ಸಿನಿಮಾ ರಿಲೀಸ್‌ಗೆ ಸಿದ್ಧವಾಗಿದೆ. ಇದನ್ನೂ ಓದಿ:‘ಸೂರ್ಯ 46’ ಅದ್ಧೂರಿ ಚಾಲನೆ- ‘ರೆಟ್ರೋ’ ಹೀರೋಗೆ ‘ಪ್ರೇಮಲು’ ನಟಿ ಜೋಡಿ
View this post on Instagram
‘ಮಾಯಾಬಜಾರ್’ ಸಿನಿಮಾ ಖ್ಯಾತಿಯ ರಾಧಾಕೃಷ್ಣ ರೆಡ್ಡಿ ನಿರ್ದೇಶನದಲ್ಲಿ ‘ಜೂನಿಯರ್’ ಸಿನಿಮಾ ತಯಾರಾಗಿದೆ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ವರಾಹಿ ಫಿಲ್ಮಂ ಪ್ರೊಡಕ್ಷನ್ ಕಿರೀಟಿ ಮೊದಲ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಬಿಗ್ ಬಜೆಟ್‌ನಲ್ಲಿ ಸಿನಿಮಾ ನಿರ್ಮಾಣ ಚಿತ್ರ ಮೂಡಿಬಂದಿದೆ. ಬಹುದೊಡ್ಡ ಹಾಗೂ ಸ್ಟಾರ್ ತಾರಾಗಣ ಈ ಸಿನಿಮಾದ ಮತ್ತೊಂದು ಹೈಲೈಟ್.
ಶ್ರೀಲೀಲಾ, ಕಿರೀಟಿ ಜೊತೆ ರವಿಚಂದ್ರನ್, ಜೆನಿಲಿಯಾ ರಿತೇಶ್ ದೇಶ್‌ಮುಖ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಜೂನಿಯರ್’ ಸಿನಿಮಾದ ತಾಂತ್ರಿಕ ಬಳಗ ಶ್ರೀಮಂತಿಕೆಯಿಂದ ಕೂಡಿದೆ. ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕ ರಾಕ್‌ಸ್ಟಾರ್ ಖ್ಯಾತಿಯ ದೇವಿಶ್ರೀ ಪ್ರಸಾದ್ ಸಂಗೀತ, ‘ಬಾಹುಬಲಿ’ ಸಿನಿಮಾ ಖ್ಯಾತಿಯ ಕಣ್ಣು ಕೆ ಸೆಂಥಿಲ್ ಕುಮಾರ್ ಕ್ಯಾಮೆರಾ ನಿರ್ದೇಶನ, ಭಾರತೀಯ ಚಿತ್ರರಂಗದ ಖ್ಯಾತ ಸಾಹಸ ನಿರ್ದೇಶಕ ಪೀಟರ್ ಹೆನ್ ಸಾಹಸ ಚಿತ್ರಕ್ಕಿದೆ.