ನವದೆಹಲಿ: ಲೋಕಸಭೆ ಅಂಗೀಕಾರದ ನಂತರ ಕೇಂದ್ರ ಸಚಿವ ಕಿರಣ್ ರಿಜಿಜು (Kiran Rijiju) ಅವರು ಗುರುವಾರ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ಮಂಡಿಸಿದರು.
ವಕ್ಫ್ ಮಂಡಳಿಗಳನ್ನು ಬಲಪಡಿಸುವ, ಮಹಿಳೆಯರು, ಮಕ್ಕಳು ಮತ್ತು ವಂಚಿತ ವರ್ಗಗಳ ಹಕ್ಕುಗಳನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ರಚಿಸಲಾಗಿದೆ ಎಂದು ಕಿರಣ್ ರಿಜಿಜು ಮಸೂದೆ ಮಂಡಿಸಿ ಹೇಳಿದರು. ಇದನ್ನೂ ಓದಿ: ವಕ್ಫ್ ಫೈಟ್: ಏನಿದು ವಿವಾದ?- ಹೊಸ ತಿದ್ದುಪಡಿ ಮಸೂದೆಯಿಂದ ಆಗುವ ಬದಲಾವಣೆ ಏನು?
ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿದ್ದು, 288 ಸದಸ್ಯರು ಇದರ ಪರವಾಗಿ ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದಾರೆ.
ಹೊಸ ಮಸೂದೆಯನ್ನು UMEED (ಏಕೀಕೃತ ವಕ್ಫ್ ನಿರ್ವಹಣೆ, ಮೌಲ್ಯವರ್ಧನೆ, ಕಾರ್ಯದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ) ಎಂದು ಕರೆಯಲಾಗುವುದು ಎಂದು ಹೇಳಿದ್ದ ಕಿರಣ್ ರಿಜಿಜು ತಿಳಿಸಿದ್ದಾರೆ. ಇದನ್ನು ಒಳ್ಳೆಯ ಉದ್ದೇಶಕ್ಕೆ ಜಾರಿಗೆ ತರಲಾಗಿದೆ. ಯಾರಿಗೂ ಇದರಿಂದ ಸಮಸ್ಯೆ ಆಗಬಾರದು ಎಂದು ತಿಳಿಸಿದರು. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು – ತಡರಾತ್ರಿ 2 ಗಂಟೆಗೆ ಅಂಗೀಕಾರ