ಕನ್ನಡದ ಕಿರಿಕ್ ನಟಿ ಸಂಯುಕ್ತಾ ಹೆಗ್ಡೆ (Samyuktha Hegde) ಅವರು ಸದ್ಯ ಮಾಲ್ಡೀವ್ಸ್ ಪ್ರವಾಸ ಫೋಟೋವನ್ನ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಸಂಯುಕ್ತಾ ಬಿಕಿನಿ ಸಖತ್ ಹಾಟ್ ಕಾಣಿಸಿಕೊಂಡು ಪಡ್ಡೆಹುಡುಗರ ನಿದ್ದೆಕದ್ದಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶನದ ‘ಕಿರಿಕ್ ಪಾರ್ಟಿ’ (Kirik Party) ಚಿತ್ರದ ಮೂಲಕ ಬಣ್ಣದ ಜಗತ್ತಿಗೆ ಕಾಲಿಟ್ಟ ನಟಿ ಸಂಯುಕ್ತಾ, ರಕ್ಷಿತ್ ಶೆಟ್ಟಿ (Rakshit Shetty) ನಾಯಕಿಯಾಗುವ ಮೂಲಕ ಮೋಡಿ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿ ಅವಕಾಶಗಳು ಸಿಗದೇ ಇದ್ದಾಗ, ತಮಿಳು (Tamil) ಚಿತ್ರರಂಗದತ್ತ ಮುಖ ಮಾಡಿದ್ದರು.
ಜಯಂರವಿ (Jayamravi) ನಟನೆಯ ‘ಕೋಮಲಿ’ ಸಿನಿಮಾದಲ್ಲಿ ಸಂಯುಕ್ತಾ ಹೆಗ್ಡೆ ಅಭಿನಯಿಸಿದ್ದರು. ಈ ಮೂಲಕ ಕಾಲಿವುಡ್‌ಗೆ ನಟಿ ಎಂಟ್ರಿ ಕೊಟ್ಟರು. ಬಳಿಕ ತಮಿಳಿನ ಸಾಲು ಸಾಲು ಚಿತ್ರಗಳಲ್ಲಿ ನಟಿಸಿದ್ದರು. ಇದೀಗ ಕನ್ನಡ- ತಮಿಳು ಚಿತ್ರಗಳಲ್ಲಿ ಸಂಯುಕ್ತಾ ಬ್ಯುಸಿಯಾಗಿದ್ದಾರೆ. ಇದನ್ನೂ ಓದಿ:ನಾನೇಕೆ ಡಿವೋರ್ಸ್ ಫೋಟೋಶೂಟ್ ಮಾಡಿಸಿದೆ?: ನಟಿ ಶಾಲಿನಿ ಬಿಚ್ಚಿಟ್ಟ ರಹಸ್ಯ
View this post on Instagram
ಸದ್ಯ ಕಿರಿಕ್ ಚೆಲುವೆ ಸಂಯುಕ್ತಾ, ಮಾಲ್ಡೀವ್ಸ್ನ ಸುಂದರ ತಾಣದಲ್ಲಿ ನೀಲಿ ಬಣ್ಣದ ಬಿಕಿನಿ ಧರಿಸಿ ಸಖತ್ ಹಾಟ್ & ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿ ಶೇರ್ ಮಾಡಿರುವ ಬಿಕಿನಿ ಫೋಟೋ, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ.