– ಅಕ್ಟೋಬರ್ 23, 24, 25 ರಂದು ಕಿತ್ತೂರಿನಲ್ಲಿ ಉತ್ಸವ
ಬೆಂಗಳೂರು: ಕಿತ್ತೂರು ಉತ್ಸವ 2024ರ ಜ್ಯೋತಿಗೆ (Kittur Victory Torch) ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ರು. ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ ಮುಂದೆ ನಡೆದ ಕಾರ್ಯಕ್ರಮದಲ್ಲಿ ಕಿತ್ತೂರು ಉತ್ಸವ ಜ್ಯೋತಿಗೆ ಸಿದ್ದರಾಮಯ್ಯ (Siddaramaiah) ಚಾಲನೆ ನೀಡಿದರು.
ಅಕ್ಟೋಬರ್ 23, 24, 25 ರಂದು ಕಿತ್ತೂರಿನಲ್ಲಿ ಉತ್ಸವ (Kittur Utsav 2024) ನಡೆಯಲಿದೆ ಅಂತ ಸಿಎಂ ತಿಳಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ, ಕಿತ್ತೂರು ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಎಂದರು.
ಮುಖ್ಯಮಂತ್ರಿ @siddaramaiah ಅವರು “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು.
ಸ್ವಾಭಿಮಾನ – ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ.
ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ ಈಕೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು… pic.twitter.com/f4dRn5YAF5
— CM of Karnataka (@CMofKarnataka) October 2, 2024
ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ ಎಂದರು. ಇದನ್ನೂ ಓದಿ: ICC Test Ranking | ಅಶ್ವಿನ್ ಹಿಂದಿಕ್ಕಿ ನಂ.1 ಪಟ್ಟಕ್ಕೇರಿದ ಬುಮ್ರಾ – ಬ್ಯಾಟಿಂಗ್‌ನಲ್ಲಿ ಯಶಸ್ವಿ, ಕೊಹ್ಲಿ ಶೈನ್
ಇಂದು ಮಹಾತ್ಮ ಗಾಂಧಿಯವರ ಜಯಂತಿ. ಜೊತೆಗೆ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನುಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ. ಗಾಂಧೀಜಿಯವರು ದೇಶದ ಸ್ವಾತಂತ್ರ‍್ಯ ಹೋರಾಟಕ್ಕೆ ನೇತೃತ್ವ ವಹಿಸಿ ಶಾಂತಿಯುತವಾಗಿ ಸ್ವಾತಂತ್ರ‍್ಯ ದೊರಕಿಸಿಕೊಟ್ಟರು. 1920 ರಿಂದ 1947 ರ ವರೆಗಿನ ಸ್ವಾತಂತ್ರ‍್ಯ ಹೋರಾಟದ ನೇತೃತ್ವ ವಹಿಸಿದ್ದರು. ಶಾಂತಿ ಅಹಿಂಸೆಯಿಂದ ಗಾಂಧಿಜೀ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟರು.ಇದೊಂದು ವಿಶೇಷ ಹೋರಾಟ ಅಂತ ತಿಳಿಸಿದರು. ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೋಳಿ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ಹಲವರು ಭಾಗಿಯಾಗಿದ್ರು.
ಬೆಂಕಿ ಅವಘಡ:
ಕಿತ್ತೂರು ಉತ್ಸವದ ಜ್ಯೋತಿ ಬೆಳಗುವ ವೇಳೆ ಸಣ್ಣ ಬೆಂಕಿ ಅವಘಡ ನಡೆದ ಘಟನೆ ನಡೀತು. ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ ಮುಂದೆ ಕಿತ್ತೂರು ಉತ್ಸವದ ಜ್ಯೋತಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಜ್ಯೋತಿ ಬೆಳಗುವ ವೇಳೆ ಸಿಎಂ ಶರ್ಟ್ ಗೆ ಬೆಂಕಿಯ ಬಿಸಿ ತಾಕಿತು. ಕೂಡಲೇ ಸಿಎಂ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡು ಸಿಎಂ ನೆರವಿಗೆ ದಾವಿಸಿದ್ರು. ಇದನ್ನೂ ಓದಿ: ಯತ್ನಾಳ್ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು: ಮಾಜಿ ಸಂಸದ ಮುನಿಸ್ವಾಮಿ