ಕಿವಿಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಾಕಾರಿಯಾಗಿದೆ. ಇದರಲ್ಲಿ ವಿಟಾಮಿನ್ ಸಿ ಇರುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ನ್ಯೂಜಿಲೆಂಡ್‌ನಲ್ಲಿ ಈ ಹಣ್ಣನ್ನು ಹೆಚ್ಚು ಬೆಳೆಯಲಾಗುತ್ತದೆ. ಪ್ರಸ್ತುತ ದಿನಗಳಲ್ಲಿ ಭಾರತದ ಮಾರುಕಟ್ಟೆಗಳಲ್ಲೂ ಹಣ್ಣು ಸಿಗುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಅನೇಕ ಪ್ರಯೋಜನವಿದೆ.
Advertisement
ರಕ್ತ ಹೆಪ್ಪುಗಟ್ಟುವಿಕೆ ತಡೆಯುತ್ತದೆ: ಕಿವಿ ಫ್ರೂಟ್ ಸೇವನೆ ರಕ್ತ ಹೆಪ್ಪುಗಟ್ಟುವುದನ್ನು ತಡೆಯಲು ಸಹಕಾರಿಯಾಗಿದೆ. ಜೊತೆಗೆ ರಕ್ತದಲ್ಲಿನ ಕೊಬ್ಬಿನ ಪ್ರಮಾಣವನ್ನು ಕಡಿಮೆ ಮಾಡುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದನ್ನು ಪ್ರತಿನಿತ್ಯ ಸೇವಿಸುವುದರಿಂದ ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ದಿನಕ್ಕೆ 2 ರಿಂದ 3 ಕಿವಿಹಣ್ಣುಗಳ ಸೇವನೆಯಿಂದ ರಕ್ತ ತೆಳುವಾಗಿ, ಹೃದಯದ ಆರೋಗ್ಯ ಸುಧಾರಿಸುತ್ತದೆ.
Advertisement
Advertisement
ರಕ್ತದೊತ್ತಡ ಕಡಿಮೆಗೊಳಿಸುತ್ತದೆ: ಕಿವಿ ಫ್ರೂಟ್‌ನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದೊತ್ತಡವನ್ನು ಕಡಿಮೆಗೊಳಿಸುತ್ತದೆ. ಜೊತೆಗೆ ಹೃದಯಾಘಾತ, ಪಾರ್ಶ್ವವಾಯು ಸಮಸ್ಯೆ ಬರದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಹೇರಳವಾಗಿ ಲ್ಯೂಟೆನಾ ಎಂಬ ಆ್ಯಂಟಿ ಆಕ್ಸಿಡೆಂಟ್ ಹಾಗೂ ವಿಟಾಮಿನ್ ಸಿ ಸಿಗುವುದರಿಂದ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ. 8 ವಾರಗಳ ಕಾಲ ಪ್ರತಿನಿತ್ಯ 3 ಹಣ್ಣುಗಳನ್ನು ಸೇವಿಸಬೇಕು. ಇದನ್ನೂ ಓದಿ: ಚಳಿಗಾಲದಲ್ಲಿ ನೀವು ಸೇವಿಸುವ ಆಹಾರದಲ್ಲಿ ಈ ಅಂಶಗಳು ಇರಲಿ
Advertisement
ಅಸ್ತಮಾ ತಡೆಗೆ ಸಹಾಯಕ: ಕಿವಿ ಫ್ರೂಟ್‌ನಲ್ಲಿ ಸಿ ವಿಟಾಮಿನ್ ಹಾಗೂ ರೋಗ ನಿರೋಧಕಗಳು ಹೆಚ್ಚಿರುವುದರಿಂದ ಉಸಿರಾಟಕ್ಕೆ ಸಂಬಂಧಿಸಿದ ಅಸ್ತಮಾವನ್ನು ಕಡಿಮೆಗೊಳಿಸುತ್ತದೆ. ಕಿವಿ ಫ್ರೂಟ್‌ನ್ನು ಪ್ರತಿನಿತ್ಯ ಸೇವಿಸುವುದರಿಂದ ಶ್ವಾಸಕೋಶಕ್ಕೆ ಸಂಬಂಧಿಸಿದ ರೋಗಗಳು ನಿವಾರಣೆಯಾಗುತ್ತವೆ.
ಆರೋಗ್ಯದಾಯಕ ಚರ್ಮ: ಮುಖದಲ್ಲಿ ಮೊಡವೆ ಆಗುವುದರಿಂದ ಮುಖದ ಕಾಂತಿಯು ಕಡಿಮೆಗೊಳ್ಳುವುದರ ಜೊತೆಗೆ ಕಿರಿಕಿರಿ ಉಂಟಾಗುತ್ತದೆ. ಇದನ್ನು ಕಡಿಮೆ ಮಾಡಲು ಪ್ರತಿನಿತ್ಯ ಕಿವಿಹಣ್ಣನ್ನು ಸೇವಿಸಿ. ಈ ಹಣ್ಣನ್ನು ಸೇವಿಸುವುದರಿಂದ ಮುಖದಲ್ಲಿ ಉಂಟಾಗುವ ಮೊಡವೆಗಳು ಕಡಿಮೆಯಾಗುತ್ತವೆ. ಕಿವಿಹಣ್ಣಿನಲ್ಲಿ ಹೆಚ್ಚು ಪೋಷಕಾಂಶಗಳಿದ್ದು, ಇದು ಚರ್ಮವನ್ನು ಕಾಂತಿಯುತವಾಗಿಡುತ್ತದೆ. ಜೊತೆಗೆ ಮೂಳೆಗಳನ್ನು ಬಲಪಡಿಸುತ್ತದೆ. ರಾತ್ರಿ ಮಲಗುವಾಗ ಅಲೋವೆರಾದೊಂದಿಗೆ ಕಿವಿಹಣ್ಣಿನ ರಸವನ್ನು ಬೆರೆಸಿ ನಿಮ್ಮ ಚರ್ಮಕ್ಕೆ ಹಚ್ಚುವುದರಿಂದ ಒಳ್ಳೆಯ ಫಲಿತಾಂಶ ಪಡೆಯಬಹುದು. ಇದನ್ನೂ ಓದಿ: ಅಕ್ಕಿ ತೊಳೆದ ನೀರಿನಿಂದ ನಿಮ್ಮ ಸೌಂದರ್ಯ ಹೆಚ್ಚಿಸಬಹುದು
ತೂಕವನ್ನು ಇಳಿಸಲು ಸಹಾಯಕ: ಹಣ್ಣಿನ ನಿಯಮಿತ ಸೇವನೆಯಿಂದ ದೇಹದ ತೂಕ ಕಡಿಮೆಯಾಗುತ್ತದೆ. ಇದರಲ್ಲಿ ನೀರಿನಾಂಶ ಅಧಿಕವಾಗಿದ್ದು, ಕೊಬ್ಬಿನಾಂಶ ಕಡಿಮೆಯಿದೆ. ಜೊತೆಗೆ ಅಗತ್ಯಕ್ಕೆ ತಕ್ಕಷ್ಟು ಕಬ್ಬಿಣಾಂಶವಿದೆ. ಇದನ್ನು ಉಪಾಹಾರದೊಂದಿಗೆ ಸೇವಿಸುವುದರಿಂದ ತೂಕ ಇಳಿಯುತ್ತದೆ.