ಮುಂಬೈ: ಭಾನುವಾರ ಕೆಕೆಆರ್ ಮತ್ತು ಡೆಲ್ಲಿ ತಂಡದ ನಡುವೆ ನಡೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮೂಲಕ ಕೋಲ್ಕತ್ತಾ ತಂಡವನ್ನು ಕಟ್ಟಿಹಾಕಿದ ಡೆಲ್ಲಿ ತಂಡ 44 ರನ್‍ಗಳ ಅಂತರದ ಜಯ ಸಾಧಿಸಿತ್ತು. ಈ ಜಯವನ್ನು ಡೆಲ್ಲಿ ಟೀಂ ಡ್ರೇಸಿಂಗ್ ರೂಮ್‍ನಲ್ಲಿ ಸಂಭ್ರಮಿಸಿಕೊಂಡಿದೆ.
ಈ ಹಿಂದೆ ಸನ್ ರೈಸರ್ಸ್ ಹೈದರಾಬಾದ್‍ನ ತಂಡದ ಪರ ಆಡುತ್ತಿದ್ದ ಓಪನರ್ ಡೇವಿಡ್ ವಾರ್ನರ್ ಡ್ರೆಸಿಂಗ್ ರೂಮ್‍ನಲ್ಲಿ ಹೌ ಈಸ್ ದಿ ಜೋಶ್ ಎಂದು ತಂಡವನ್ನು ಹುರಿದುಂಬಿಸಿದರು.
Advertisement
Advertisement
ಈ ಬಗ್ಗೆ ಡೆಲ್ಲಿ ತಂಡದ ಅಧಿಕೃತ ಇನ್ಸ್‌ಸ್ಟಾಗ್ರಾಮ್ ಖಾತೆ ವೀಡಿಯೋ ತುಣುಕನ್ನು ಹಂಚಿಕೊಂಡಿದೆ. ಈ ವೀಡಿಯೋದಲ್ಲಿ ವಾರ್ನರ್ ಹೌ ಈಸ್ ದಿ ಜೋಶ್ ಎಂದು ಕೇಳುತ್ತಾರೆ. ಅದಕ್ಕೆ ತಂಡದ ಉಳಿದ ಆಟಗಾರರು ಹೈ ಸರ್ ಎನ್ನುತ್ತಾರೆ. ಈ ಡೈಲಾಗ್ ಹಿಂದಿ ಸಿನಿಮಾ ಉರಿಯದ್ದಾಗಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
Advertisement
View this post on Instagram
Advertisement
ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಎದುರಾಳಿ ತಂಡ ಡೆಲ್ಲಿಯನ್ನು ಮೊದಲು ಬ್ಯಾಟಿಂಗ್‍ಗೆ ಆಹ್ವಾನಿಸಿತು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ಮತ್ತು ಡೇವಿಡ್ ವಾರ್ನರ್ ಮನಬಂದಂತೆ ಬ್ಯಾಟ್ ಬೀಸಿದರು. ಕೋಲ್ಕತ್ತಾ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಈ ಜೋಡಿ ಮೊದಲ ವಿಕೆಟ್‍ಗೆ 93 ರನ್ (52 ಎಸೆತ)ಗಳ ಜೊತೆಯಾಟವಾಡಿದರು. ಪೃಥ್ವಿ ಶಾ 51 ರನ್ (29 ಎಸೆತ, 7 ಬೌಂಡರಿ, 2 ಸಿಕ್ಸ್) ಸಿಡಿಸಿ ಔಟ್ ಆದರು. ಇದನ್ನೂ ಓದಿ: ಡೆಲ್ಲಿ ದರ್ಬಾರ್‌ಗೆ ಕೆಕೆಆರ್ ಢಮಾರ್ – ಮಿಂಚಿದ ವಾರ್ನರ್
ಆ ಬಳಿಕ ಪಂತ್ ಜೊತೆಗೂಡಿದ ವಾರ್ನರ್ ಮತ್ತಷ್ಟು ಅಬ್ಬರದ ಬ್ಯಾಟಿಂಗ್‍ಗೆ ಮುಂದಾದರು. ಅಂತಿಮವಾಗಿ ವಾರ್ನರ್ 61 ರನ್ (45 ಎಸೆತ, 6 ಬೌಂಡರಿ, 2 ಸಿಕ್ಸ್) ಮತ್ತು ರಿಷಭ್ ಪಂತ್ 27 ರನ್ (14 ಎಸೆತ, 2 ಬೌಂಡರಿ, 2 ಸಿಕ್ಸ್) ಸಿಡಿಸಿ 2ನೇ ವಿಕೆಟ್‍ಗೆ 55 ರನ್ (27 ಎಸೆತ) ಒಟ್ಟು ಸೇರಿಸಿ ವಿಕೆಟ್ ಒಪ್ಪಿಸಿದರು. ಇದನ್ನೂ ಓದಿ: ಚಹಲ್, ಹೆಟ್ಮೆಯರ್ ಆಟಕ್ಕೆ ಲಕ್ನೋ ಲಾಕ್ – ರಾಜಸ್ಥಾನಕ್ಕೆ ರೋಚಕ ಜಯ