– ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಕುಸಿದ ಲಕ್ನೋ ಸೂಪರ್ ಜೈಂಟ್ಸ್
ನವದೆಹಲಿ: ಅಭಿಷೇಕ್ ಪೊರೆಲ್ (Abishek Porel) ಹಾಗೂ ಕೆಎಲ್ ರಾಹುಲ್ (KL Rahul) ಅರ್ಧಶತಕಗಳ ಬ್ಯಾಟಿಂಗ್ ನೆರವಿನಿಂದ ಲಕ್ನೋ ಸೂಪರ್ ಜೆಂಟ್ಸ್ (Lucknow Super Giants) ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) 8 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಅಂಕಪಟ್ಟಿಯಲ್ಲಿ 2ನೇ ಸ್ಥಾನ ಭದ್ರಪಡಿಸಿಕೊಂಡಿದ್ದರೆ, ಲಕ್ನೋ ತಂಡ 5ನೇ ಸ್ಥಾನಕ್ಕೆ ಕುಸಿದಿದೆ.
ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೆಂಟ್ಸ್, ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಲಕ್ನೋ ನೀಡಿದ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 17.5 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಗೆಲುವು ಸಾಧಿಸಿದೆ.ಇದನ್ನೂ ಓದಿ: ಜಾತಿ ಜನಗಣತಿ ವರದಿ ಚರ್ಚೆಗೆ ವಿಶೇಷ ಅಧಿವೇಶನ ಕರೆಯಲಿ: ಸಿ.ಟಿ ರವಿ ಆಗ್ರಹ
ಗೆಲುವಿನ ಗುರಿ ಬೆನ್ನಟ್ಟಿದ ಡೆಲ್ಲಿ ತಂಡದ ಪರ ಕರುಣ್ ನಾಯರ್ 9 ಎಸೆತಗಳಲ್ಲಿ 15, ಅಭಿಷೇಕ್ ಪೊರೆಲ್ 36 ಎಸೆತಗಳಲ್ಲಿ 51, ಕೆಎಲ್ ರಾಹುಲ್ ಔಟಾಗದೇ 42 ಎಸೆತಗಳಲ್ಲಿ 57 ರನ್, ಅಕ್ಷರ್ ಪಟೇಲ್ ಔಟಾಗದೇ 20 ಎಸೆತಗಳಲ್ಲಿ 34 ರನ್‌ಗಳಿಸಿತು. ಲಕ್ನೋ ಪರ ಏಡನ್ ಮಾರ್ಕ್ರಮ್ 2 ವಿಕೆಟ್ ಕಬಳಿಸಿದರು.
ಲಕ್ನೋ ಸೂಪರ್ ಜೆಂಟ್ಸ್ ಪರ ಏಡನ್ ಮಾರ್ಕ್ರಮ್ 33 ಎಸೆತಗಳಲ್ಲಿ 52, ಮಿಚೆಲ್ ಮಾರ್ಷ್ 36 ಎಸೆತಗಳಲ್ಲಿ 45, ಆಯುಷ್ ಬಡೋನಿ 21 ಎಸೆತಗಳಲ್ಲಿ 36 ಹಾಗೂ ಡೇವಿಡ್ ಮಿಲ್ಲರ್ ಔಟಾಗದೇ 15 ಎಸೆತಗಳಲ್ಲಿ 14 ರನ್‌ಗಳಿಸಿ, 160 ರನ್‌ಗಳ ಗೆಲುವಿನ ಗುರಿ ನೀಡುವಲ್ಲಿ ನೆರವಾದರು.
ಡೆಲ್ಲಿ ಪರ ಮುಖೇಶ್ ಕುಮಾರ್ 4, ಮಿಚೆಲ್ ಸ್ಟಾರ್ಕ್ ಹಾಗೂ ದುಷ್ಮಂತ ಚಮೀರ ತಲಾ 1 ವಿಕೆಟ್ ಕಬಳಿಸಿದರು.ಇದನ್ನೂ ಓದಿ: ಕಾಂಗ್ರೆಸ್ಸಿಗರಿಂದ ಜನರ ಕಣ್ಣಿಗೆ ಮಣ್ಣೆರಚುವ ಕೆಲಸ, ಇದು ಜಾಹೀರಾತಿನ ಸರ್ಕಾರ: ಬಿವೈವಿ