Connect with us

Cricket

ದ್ರಾವಿಡ್ ದಾಖಲೆ ಸರಿಗಟ್ಟಿದ ಕೆಎಲ್ ರಾಹುಲ್

Published

on

ಲಂಡನ್: ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಅಪರೂಪದ ಸಾಧನೆ ಮಾಡಿದ್ದು, ಟೂರ್ನಿಯಲ್ಲಿ 13 ಕ್ಯಾಚ್ ಪಡೆಯುವ ಮೂಲಕ ರಾಹುಲ್ ದ್ರಾವಿಡ್ ದಾಖಲೆ ಸರಿಗಟ್ಟಿದ್ದಾರೆ.

ಓವೆಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ 2ನೇ ದಿನದಾಟದಲ್ಲಿ ರಾಹುಲ್, ಸ್ಟುವರ್ಟ್ ಬ್ರಾಡ್ (98) ಕ್ಯಾಚ್ ಪಡೆಯುವ ಮೂಲಕ ಈ ಸಾಧನೆ ಮಾಡಿದರು. ಈ ಹಿಂದೆ ಟೀಂ ಇಂಡಿಯಾದ ರಾಹುಲ್ ದ್ರಾವಿಡ್ 2004-05 ರಲ್ಲಿ ನಡೆದ ಆಸೀಸ್ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಟೂರ್ನಿಯಲ್ಲಿ 13 ಕ್ಯಾಚ್ ಪಡೆದಿದ್ದರು. ಈ ಪಟ್ಟಿಯಲ್ಲಿ ಆಸೀಸ್ ಆಟಗಾರ ಜಾಕ್ ಗ್ರೆಗೊರಿ 1920-21ರಲ್ಲಿ ನಡೆದ ಆಸಿಸ್ ಟೆಸ್ಟ್ ಟೂರ್ನಿಯಲ್ಲಿ 15 ಕ್ಯಾಚ್ ಪಡೆದು ದಾಖಲೆ ನಿರ್ಮಿಸಿದ್ದರು.

ವಿಶೇಷವಾಗಿ ಇಂಗ್ಲೆಂಡ್ ನೆಲದಲ್ಲಿ ನಡೆದ ಟೂರ್ನಿಯಲ್ಲಿ ಅತೀ ಹೆಚ್ಚು ಕ್ಯಾಚ್ ಪಡೆದ ದಾಖಲೆಯನ್ನು ಕೆಎಲ್ ರಾಹುಲ್ ಪಡೆದಿದ್ದಾರೆ. ಈ ಹಿಂದೆ ದಕ್ಷಿಣ ಆಫ್ರಿಕಾದ ಜಾನ್ ಇಕಿನ್ 1951 ರಲ್ಲಿ 12 ಕ್ಯಾಚ್ ಪಡೆದಿದ್ದರು. ಉಳಿದಂತೆ ಮೂರನೇ ಟೆಸ್ಟ್ ಪಂದ್ಯದ ಇನ್ನಿಂಗ್ಸ್ ಒಂದರಲ್ಲಿ 7 ಕ್ಯಾಚ್ ಹಿಡಿದಿದ್ದ ಕೆಎಲ್ ರಾಹುಲ್ ಟೆಸ್ಟ್ ನಲ್ಲಿ ವಿಕೆಟ್ ಕೀಪರ್ ಹೊರತು ಪಡಿಸಿ ಅತೀ ಹೆಚ್ಚು ಕ್ಯಾಚ್ ಪಡೆದ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದರು.

ಅಂತಿಮ ಟೆಸ್ಟ್ ಪಂದ್ಯದ 2ನೇ ದಿನದಾಟವನ್ನು 198/7 ರನ್‍ಗಳಿಂದ ಮುಂದುವರೆಸಿದ ಇಂಗ್ಲೆಂಡ್ ಬಾಲಂಗೋಚಿಗಳು ಟೀಂ ಇಂಡಿಯಾ ಬೌಲರ್ ಗಳನ್ನು ಕೆಲ ಕಾಲ ಕಾಡಿದರು. ಈ ನಡುವೆ ಅರ್ಧ ಶತಕ ಸಿಡಿದ ಬಟ್ಲರ್ ತಂಡದ ಸ್ಕೋರ್ 300 ಗಡಿ ದಾಟಲು ನೆರವಾದರು. ಬಟ್ಲರ್ ಗೆ ಇತರೇ ಆಟಗಾರರು ಉತ್ತಮ ಬೆಂಬಲ ನೀಡಿದರು. ಈ ವೇಳೆ ಬಿರುಸಿನ ಆಟಕ್ಕೆ ಮುಂದಾದ ಬಟ್ಲರ್ 89 ರನ್ ಗಳಸಿ ವಿಕೆಟ್ ಒಪ್ಪಿಸಿದರು. ಅದಾಗಲೇ ಇಂಗ್ಲೆಂಡ್ ಸ್ಪರ್ಧಾತ್ಮಕ ಮೊತ್ತ (332 ರನ್) ಕಲೆಹಾಕಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv