ಮುಂಬೈ: ಟೀಂ ಇಂಡಿಯಾ ಆಟಗಾರ ಕೆಎಲ್ ರಾಹುಲ್ ಟಿ20 ಕ್ರಿಕೆಟ್ ಪಂದ್ಯದಲ್ಲಿ ಅಪರೂಪದ ದಾಖಲೆ ಮಾಡುವ ಸನಿಹದಲ್ಲಿದ್ದಾರೆ.
ಟಿ20 ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಅವರು ವೇಗವಾಗಿ 1 ಸಾವಿರ ರನ್ ಗಳಿಸಿದ ಆಟಗಾರ ಎನಿಸಿಕೊಳ್ಳಲು 121 ರನ್ ಗಳಿಸಬೇಕಿದೆ. ಇದುವರೆಗೂ 24 ಇನ್ನಿಂಗ್ಸ್ ಗಳಲ್ಲಿ 879 ರನ್ ಗಳಿಸುವ ರಾಹುಲ್, ವೆಸ್ಟ್ ಇಂಡೀಸ್ ವಿರುದ್ಧ ಟೂರ್ನಿಯಲ್ಲಿ ಈ ಸಾಧನೆ ಮಾಡುವ ಅವಕಾಶವನ್ನು ಪಡೆದುಕೊಂಡಿದ್ದಾರೆ. ಟಿ20 ಕ್ರಿಕೆಟ್‍ನಲ್ಲಿ ರಾಹುಲ್ 2 ಶತಕ, 5 ಅರ್ಧ ಶತಕಗಳನ್ನು ಸಿಡಿಸಿದ್ದಾರೆ. ಅಜೇಯ 110 ರನ್ ರಾಹುಲ್ ಅವರ ಗರಿಷ್ಠ ಮೊತ್ತವಾಗಿದೆ.
Advertisement
Advertisement
ಒಂದೊಮ್ಮೆ ವಿಂಡೀಸ್ ವಿರುದ್ಧ ಮೊದಲ ಟಿ20 ಪಂದ್ಯದಲ್ಲಿ ರಾಹುಲ್ 121 ರನ್ ಗಳಿಸಿದರೆ ಕೇವಲ 25ನೇ ಇನ್ನಿಂಗ್ಸ್ ನಲ್ಲಿ 1 ಸಾವಿರ ರನ್ ಪೂರೈಸಿದ ಆಟಗಾರ ಎನಿಸಿಕೊಳ್ಳಿದ್ದಾರೆ. ಸದ್ಯ ಪಾಕಿಸ್ತಾನದ ಕ್ರಿಕೆಟ್ ಆಟಗಾರ ಬಾಬರ್ ಅಜಮ್ ಹೆಸರಿನಲ್ಲಿ ಈ ದಾಖಲೆ ಇದ್ದು, ಅಜಮ್ 26 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್ ಸಿಡಿಸಿದ್ದರು. ಪಟ್ಟಿಯಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದು, 27 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಒಂದೊಮ್ಮೆ ರಾಹುಲ್ 121 ರನ್ ಸಿಡಿಸಿದರೆ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ದಾಖಲೆಯನ್ನು ನಿರ್ಮಿಸಲಿದ್ದಾರೆ.