– ಒಂದೇ ಪಂದ್ಯದಲ್ಲಿ ರಿಷಭ್, ರಾಹುಲ್ ದಾಖಲೆ
ಲಂಡನ್: ನಾಟಿಂಗ್ ಹ್ಯಾಮ್‍ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದ ಮೇಲೆ ಭಾರತ ಸಂಪೂರ್ಣ ಹಿಡಿತ ಸಾಧಿಸಿದ್ದು, ಗೆಲುವಿಗೆ ಒಂದು ವಿಕೆಟ್ ಅಷ್ಟೇ ಬಾಕಿ ಇದೆ.
ಅಂತಿಮ ಇನ್ನಿಂಗ್ಸ್ ನಲ್ಲಿ 521 ರನ್‍ಗಳ ಬೃಹತ್ ಗುರಿ ಹಿಂಬಾಲಿಸಿದ ಇಂಗ್ಲೆಂಡ್ ನಾಲ್ಕನೇ ದಿನದಾಂತ್ಯಕ್ಕೆ 102 ಓವರ್‍ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿದೆ. ಅಲ್ಲದೆ ಇನ್ನು ಒಂದು ವಿಕೆಟ್ ಮಾತ್ರ ಬಾಕಿ ಉಳಿದಿರುವಂತೆಯೇ 210 ರನ್ ಗಳಿಸಬೇಕಿದೆ.
Advertisement
On the Honours Board – @imVkohli
India captain Virat Kohli got his name etched on the Trent Bridge Honours Board after notching his 23rd Test ton at the venue – by @RajalArora
????️https://t.co/8m77Od6emO #ENGvIND pic.twitter.com/3NwWCqtd4K
— BCCI (@BCCI) August 22, 2018
Advertisement
ಪಂದ್ಯದಲ್ಲಿ ಟೀಂ ಇಂಡಿಯಾ ಪರ ರಿಷಬ್, ಕೆಎಲ್ ರಾಹುಲ್ ಹೊಸದೊಂದು ದಾಖಲೆ ಬರೆದಿದ್ದಾರೆ. ಕೆಎಲ್ ರಾಹುಲ್ ಹಾಗೂ ಚೊಚ್ಚಲ ಟೆಸ್ಟ್ ಪಂದ್ಯವಾಡುತ್ತಿರುವ ರಿಷಭ್ ಪಂತ್ ಎರಡೂ ಇನ್ನಿಂಗ್ಸ್ ನಲ್ಲಿ ಕ್ರಮವಾಗಿ 7,6 ಕ್ಯಾಚ್ ಹಿಡಿಯುವ ಮೂಲಕ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ. ಇಬ್ಬರ ದಾಖಲೆಯೂ ಬ್ಯಾಟಿಂಗ್ ಹಾಗೂ ಬೌಲಿಂಗ್ ಹೊರತಾಗಿ ನಿರ್ಮಾಣವಾಗಿರುವುದು ವಿಶೇಷವಾಗಿದೆ.
Advertisement
ರಾಹುಲ್ ಮೊದಲ ಇನ್ನಿಂಗ್ಸ್ ನಲ್ಲಿ 3 ಕ್ಯಾಚ್ ಹಾಗೂ 2ನೇ ಇನ್ನಿಂಗ್ಸ್ 4 ಕ್ಯಾಚ್ ಪಡೆದಿದ್ದಾರೆ. ಈ ಮೂಲಕ ಇಂಗ್ಲೆಂಡ್ ವಿರುದ್ಧ ಮಾರಕ ಬೌಲಿಂಗ್ ದಾಳಿ ನಡೆಸಿದ ಆಟಗಾರರಿಗೆ ರಾಹುಲ್ ಸಾಥ್ ನೀಡಿದರು. ಇಂಗ್ಲೆಂಡ್ ವಿರುದ್ಧ ಪಂದ್ಯವೊಂದರಲ್ಲಿ ಟೀಂ ಇಂಡಿಯಾ ಆಟಗಾರರ ಪಡೆದಿರುವ ಅಧಿಕ ಕ್ಯಾಚ್ ಎಂಬ ಹೆಗ್ಗಳಿಕೆಯನ್ನು ರಾಹುಲ್ ಪಡೆದಿದ್ದಾರೆ. ಇದಕ್ಕೂ ಮೊದಲು ಟೆಸ್ಟ್ ಗೆ ಪಾದಾರ್ಪಣೆ ಮಾಡಿದ್ದ ರಿಷಭ್ ಪಂತ್ ಮೊದಲ ಇನ್ನಿಂಗ್ಸ್ ನಲ್ಲಿ 5 ಕ್ಯಾಚ್ ಪಡೆದು ದಾಖಲೆ ನಿರ್ಮಿಸಿದ್ದರು. ಈ ಪಂದ್ಯದಲ್ಲಿ ಜಸ್ ಪ್ರೀತ್ ಬುಮ್ರಾ 29 ಒವರ್ ಗಳಲ್ಲಿ 85 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು. ಉಳಿದಂತೆ ಇಶಾಂತ್ ಶರ್ಮಾ 2, ಮಹಮ್ಮದ್ ಶಮಿ ಹಾಗೂ ಪಾಂಡ್ಯ ತಲಾ 1 ವಿಕೆಟ್ ಪಡೆದರು.
Advertisement
England survive to see day five!
But they only have one wicket left.
A dogged resistance from Buttler, Stokes and the tailenders gets England to 311/9, 209 runs behind India.#ENGvIND scorecard ⬇️https://t.co/3x88SzxNtJ pic.twitter.com/u1FuwVXhx0
— ICC (@ICC) August 21, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv