ಕ್ಯಾನ್ಬೆರಾ: ಟೀಂ ಇಂಡಿಯಾ (Team India) ಆರಂಭಿಕ ಕನ್ನಡಿಗ ಕೆ.ಎಲ್.ರಾಹುಲ್ (KL Rahul) ತಮ್ಮ ವಿರುದ್ಧದ ಟೀಕೆಗಳಿಗೆ ಬ್ಯಾಟ್ ಮೂಲಕವೇ ಉತ್ತರ ಕೊಟ್ಟಿದ್ದಾರೆ.
ಆಸ್ಟ್ರೇಲಿಯಾದ ಅಡಿಲೇಡ್ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶದ (Bangladesh) ವಿರುದ್ಧದ ಪಂದ್ಯದಲ್ಲಿ ಅರ್ಧ ಶತಕ ಸಿಡಿಸುವ ಮೂಲಕ ಅಬ್ಬರಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಅಬ್ಬರಿಸೋದನ್ನ ನೀವು ನೋಡ್ತೀರಾ – ಕನ್ನಡಿಗನ ಬೆಂಬಲಕ್ಕೆ ನಿಂತ ದ್ರಾವಿಡ್
Advertisement
Advertisement
ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸುತ್ತಿದ್ದ ಕೆ.ಎಲ್ ರಾಹುಲ್ (KL Rahul) ಪಾಕಿಸ್ತಾನ (Pakistan), ನೆದರ್‌ಲ್ಯಾಂಡ್ ಹಾಗೂ ದಕ್ಷಿಣ ಆಫ್ರಿಕಾದ (South Africa) ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ ಟೀಕೆಗಳಿಗೆ ಗುರಿಯಾಗಿದ್ದರು. ಮೂರು ಪಂದ್ಯಗಳಲ್ಲಿ 34 ಎಸೆತಗಳನ್ನು ಎದುರಿಸಿದ್ದ ರಾಹುಲ್ 22 ರನ್‌ಗಳನ್ನಷ್ಟೇ ಗಳಿಸಿದ್ದರು. ರಾಹುಲ್ ಕಳಪೆ ಪ್ರದರ್ಶನ ನೀಡಿದ್ದಕ್ಕೆ ಟೀಂ ಇಂಡಿಯಾದ (Team India) ಅಭಿಮಾನಿಗಳು ರಾಹುಲ್ ವಿರುದ್ಧ ಮುಗಿಬಿದ್ದಿದ್ದರು. ಸಾಕಷ್ಟು ಟ್ರೋಲ್‌ಗಳಿಗೆ ಗುರಿ ಮಾಡಿದ್ದರು.
Advertisement
Advertisement
ಇದೀಗ ಟೀಕೆಗಳಿಗೆ ರಾಹುಲ್ ಬ್ಯಾಟ್ ಮೂಲಕವೇ ಉತ್ತರ ಕೊಟ್ಟಿದ್ದಾರೆ. ಬಾಂಗ್ಲಾದೇಶದ ವಿರುದ್ಧ ಅಬ್ಬರಿಸಿದ ರಾಹುಲ್ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದಾರೆ. ಇದರಲ್ಲಿ 4 ಸಿಕ್ಸರ್ ಹಾಗೂ 3 ಬೌಂಡರಿಗಳು ಸೇರಿವೆ. ಇದನ್ನೂ ಓದಿ: ನಾನ್ ಸ್ಟ್ರೈಕರ್ ರನೌಟ್‍ನಿಂದ ಪಾರಾಗಲು ಹೊಸ ಐಡಿಯಾ ಹುಡುಕಿದ ಗ್ಲೆನ್ ಫಿಲಿಪ್ಸ್
ನಿನ್ನೆಯಷ್ಟೇ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ (Rahul Dravid), ಕೆ.ಎಲ್.ರಾಹುಲ್ ಬೆಂಬಲಿಸಿ, ಮೆಚ್ಚುಗೆಯ ಮಾತುಗಳನ್ನಾಡಿದ್ದರು. ನನ್ನ ಪ್ರಕಾರ ಕೆ.ಎಲ್ ರಾಹುಲ್ ಅವರೊಬ್ಬ ಅತ್ಯದ್ಭುತ ಕ್ರಿಕೆಟಿಗ. ಅವರು ಈಗಾಗಲೇ ತಮ್ಮ ಸಾಮರ್ಥ್ಯವೇನು ಎಂಬುದನ್ನು ಸಾಬೀತು ಮಾಡಿದ್ದಾರೆ. ಮುಂದಿನ ಪಂದ್ಯಗಳಲ್ಲಿ ರಾಹುಲ್ ಅಬ್ಬರಿಸೋದನ್ನ ನೀಡವು ನೋಡುತ್ತೀರಿ ಎಂದು ದ್ರಾವಿಡ್ ಹೇಳಿದ್ದರು.