ದುಬೈ: ಟಿ20 ವಿಶ್ವಕಪ್‍ನಲ್ಲಿ ಭಾರತದ ಆರಂಭಿಕ ಆಟಗಾರ ಕನ್ನಡಿಗ ಕೆ.ಎಲ್ ರಾಹುಲ್ ಕೇವಲ 18 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ನೂತನ ಮೈಲಿಗಲ್ಲು ಸಾಧಿಸಿದ್ದಾರೆ.
Advertisement
ಭಾರತ ಹಾಗೂ ಸ್ಕಾಟ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸಿದ ಕೆ.ಎಲ್ ರಾಹುಲ್ 18 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಟಿ20 ವಿಶ್ವಕಪ್‍ನಲ್ಲಿ ವೇಗವಾಗಿ ಅರ್ಧಶತಕ ಸಿಡಿಸಿದ ಭಾರತದ ಎರಡನೇ ಆಟಗಾರ ಎನಿಸಿಕೊಂಡರು. ಇದನ್ನೂ ಓದಿ: ಸ್ಕಾಟ್ಲೆಂಡ್ ಮೇಲೆ ಸವಾರಿ ಮಾಡಿದ ಭಾರತ – 8 ವಿಕೆಟ್‍ಗಳ ಜಯದೊಂದಿಗೆ ಸೆಮೀಸ್ ಆಸೆ ಜೀವಂತ
Advertisement
Advertisement
2007ರ ಟಿ20 ವಿಶ್ವಕಪ್‍ನಲ್ಲಿ ಭಾರತದ ಆಲ್‍ರೌಂಡರ್ ಯುವರಾಜ್ ಸಿಂಗ್ ಇಂಗ್ಲೆಂಡ್ ವಿರುದ್ಧ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ದಾಖಲೆ ಬರೆದಿದ್ದರು. ಆ ಬಳಿಕ ಇದೀಗ 18 ಎಸೆತಗಳಲ್ಲಿ ರಾಹುಲ್ ಅರ್ಧಶತಕ ಸಿಡಿಸಿ ಅತೀ ವೇಗವಾಗಿ ಅರ್ಧಶತಕ ಸಿಡಿಸಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಇವರ ಬಳಿಕ ಮೂರನೇ ಸ್ಥಾನದಲ್ಲಿ ಮಾಜಿ ಆಟಗಾರ ಗೌತಮ್ ಗಂಭೀರ್ ಇದ್ದಾರೆ. ಇವರು 2009ರ ಟಿ20 ವಿಶ್ವಕಪ್‍ನಲ್ಲಿ 19 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದರು. ಇದನ್ನೂ ಓದಿ: ಟೀಂ ಇಂಡಿಯಾ ಸೆಮಿಫೈನಲ್ ಕನಸು ನನಸಾಗಲು ಇದೊಂದೇ ಮಾರ್ಗ
Advertisement