ಮುಂಬೈ: ದಕ್ಷಿಣ ಆಫ್ರಿಕಾ (South Africa) ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಟೀಂ ಇಂಡಿಯಾವನ್ನು (Team India) ಕೆಎಲ್ ರಾಹುಲ್ (KL Rahul) ಮುನ್ನಡೆಸಲಿದ್ದಾರೆ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಇಂದು ತಂಡವನ್ನು ಪ್ರಕಟಿಸಿದ್ದು ಕುತ್ತಿಗೆ ನೋವಿನಿಂದ ಶುಭಮನ್ ಗಿಲ್ (Shubman Gill) ಬಳಲುತ್ತಿರುವುದರಿಂದ ರಾಹುಲ್ ಅವರಿಗೆ ನಾಯಕ ಪಟ್ಟದ ಜವಾಬ್ದಾರಿ ನೀಡಲಾಗಿದೆ.
ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ (Rishabh Pant) ಭಾರತದ ಏಕದಿನ ತಂಡಕ್ಕೆ ಮರಳಿದ ಋತುರಾಜ್ ಗಾಯಕ್ವಾಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ತಂದೆಗೆ ಹೃದಯಾಘಾತ – ಇಂದು ನಡೆಯಬೇಕಿದ್ದ ಸ್ಮೃತಿ ಮಂಧಾನ ಮದುವೆ ಮುಂದೂಡಿಕೆ

ಮೊದಲ ಏಕದಿನ ನ. 30 ರಂದು ರಾಂಚಿಯಲ್ಲಿ ನಡೆದರೆ ಎರಡನೇ ಏಕದಿನ ಡಿ.3 ರಂದು ರಾಯ್‌ಪುರದಲ್ಲಿ ನಡೆಯಲಿದೆ. ಮೂರನೇ ಏಕದಿನ ವಿಶಾಖಪಟ್ಟಣದಲ್ಲಿ ನ.6 ರಂದು ನಡೆಯಲಿದೆ. ಇದನ್ನೂ ಓದಿ: ನ.25 ರಂದು ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ – ಒಂದೇ ಬಣದಲ್ಲಿ ಇಂಡೋ-ಪಾಕ್
15 ಜನ ಆಟಗಾರರ ಪಟ್ಟಿ
ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್) ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಋತುರಾಜ್ ಗಾಯಕ್‌ವಾಡ್, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಧ್ರುವ್ ಜುರೆಲ್.
