ನವದೆಹಲಿ: ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ (KL Rahul) ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಈ ಮೂಲಕ ಮುಂಬರುವ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ (Team India) ಆಡುವ ನಿರೀಕ್ಷೆ ಇದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಲ್ಲಿ ಬರೆದುಕೊಂಡಿರುವ ಅವರು, ನಾನು ಆರೋಗ್ಯವಾಗಿದ್ದೇನೆ. ಚಿಕಿತ್ಸೆ ನೀಡಿದ ವೈದ್ಯರು ಹಾಗೂ ಸಿಬ್ಬಂದಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಇದನ್ನೂ ಓದಿ: ಸೂರ್ಯ ಸ್ಫೋಟಕ ಆಟಕ್ಕೆ ಆರ್‌ಸಿಬಿ ಬರ್ನ್ – ಮುಂಬೈಗೆ 6 ವಿಕೆಟ್‌ಗಳ ಭರ್ಜರಿ ಜಯ
Advertisement
Advertisement
ಕಳೆದ ತಿಂಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಐಪಿಎಲ್ ಪಂದ್ಯದಲ್ಲಿ ವೇಳೆ ಲಕ್ನೋ ಪರ ಫೀಲ್ಡಿಂಗ್ ವೇಳೆ ರಾಹುಲ್ ಕಾಲಿನ ಗಾಯಕ್ಕೊಳಗಾಗಿದ್ದರು. ಇದರಿಂದಾಗಿ ನಂತರದ ಐಪಿಎಲ್ ಪಂದ್ಯಗಳಿಂದ ಅವರು ಹೊರಗುಳಿಯ ಬೇಕಾಯಿತು. ಅಲ್ಲದೆ ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್‌ನಿಂದಲೂ ಅವರು ದೂರ ಉಳಿಯುವ ಸಾಧ್ಯತೆಗಳಿವೆ.
Advertisement
Advertisement
ಅವರ ಅನುಪಸ್ಥಿತಿಯಲ್ಲಿ ಭಾನುವಾರದ ಐಪಿಎಲ್ ಪಂದ್ಯದಲ್ಲಿ ತಂಡವನ್ನು ಕೃನಾಲ್ ಪಾಂಡ್ಯ (Krunal Pandya) ಮುನ್ನಡೆಸಿದ್ದರು. ಇಂಗ್ಲೆಂಡ್‍ನಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದಲ್ಲಿ ಅವರ ಜಾಗವನ್ನು ಇಶಾನ್ ಕಿಶನ್ (Ishan Kishan) ತುಂಬಲಿದ್ದಾರೆ.
ಎಲ್ಲಾ ಬಗೆಯ ಕ್ರಿಕೆಟ್‍ನಲ್ಲಿ ತಮ್ಮ ಪ್ರಾವೀಣ್ಯತೆಯಿಂದ ಖ್ಯಾತಿ ಪಡೆದಿರುವ ಕೆಎಲ್ ರಾಹುಲ್ ಏಷ್ಯಾ ಕಪ್ (Asia Cup) ಹಾಗೂ ಏಕದಿನ ವಿಶ್ವಕಪ್ (ODI World Cup) ಪಂದ್ಯಗಳಲ್ಲಿ ಆಡುವ ನಿರೀಕ್ಷೆ ಇದೆ. ಇದನ್ನೂ ಓದಿ: ನಿರ್ಣಾಯಕ ಪಂದ್ಯಕ್ಕೂ ಮುನ್ನವೇ ಮುಂಬೈಗೆ ಆಘಾತ – IPLನಿಂದ ವೇಗಿ ಜೋಫ್ರಾ ಆರ್ಚರ್ ಔಟ್