ಮುಂಬೈ: ಆಸೀಸ್ ವಿರುದ್ಧದ ಟೆಸ್ಟ್ ಟೂರ್ನಿಯ ಅಂತಿಮ ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ 13 ಆಟಗಾರರ ಪಟ್ಟಿಯನ್ನು ಪ್ರಕಟಿಸಿದ್ದು, ಕನ್ನಡಿಗ ಕೆಎಲ್ ರಾಹುಲ್ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದಲ್ಲಿ ಜಯ ಪಡೆದು ಆತ್ಮವಿಶ್ವಾಸದಲ್ಲಿರುವ ಟೀಂ ಇಂಡಿಯಾ 4ನೇ ಟೆಸ್ಟ್ ಗೆಲ್ಲುವ ಮೂಲಕ ಆಸೀಸ್ ನೆಲದಲ್ಲಿ ಇತಿಹಾಸ ನಿರ್ಮಿಸುವ ವಿಶ್ವಾಸದಲ್ಲಿದೆ. ಮಹತ್ವದ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಕೂಡ ಆಡುವ ನಿರೀಕ್ಷೆ ಇದೆ.
Advertisement
Advertisement
ಪಟ್ಟಿಯಲ್ಲಿ ಟೀಂ ಇಂಡಿಯಾದಲ್ಲಿ ಅನುಭವಿ ವೇಗಿ ಇಶಾಂತ್ ಶರ್ಮಾ ಸ್ಥಾನದಲ್ಲಿ ಉಮೇಶ್ ಯಾದವ್ ಅವಕಾಶ ಪಡೆದಿದ್ದು, ಗಾಯದ ಸಮಸ್ಯೆಯಿಂದ ಇಶಾಂತ್ ಶರ್ಮಾ ಹೊರಗುಳಿದಿದ್ದಾರೆ. ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಇಶಾಂತ್ 3 ಟೆಸ್ಟ್ ಪಂದ್ಯಗಳಿಂದ ಇದುವರೆಗೂ 11 ವಿಕೆಟ್ ಪಡೆದಿದ್ದರು.
Advertisement
ರೋಹಿತ್ ಶರ್ಮಾ ಕೌಟುಂಬಿಕ ಕಾರಣಗಳಿಂದ ಭಾರತಕ್ಕೆ ಹಿಂದಿರುಗಿದ್ದು, 13 ಬಳಗದಲ್ಲಿ ಕೆಎಲ್ ರಾಹುಲ್ ಅವಕಾಶ ಪಡೆಯುಲು ಪ್ರಮುಖ ಕಾರಣ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ. ಟೀಂ ಇಂಡಿಯಾ ನಾಯಕ ನಾಯಕ ವಿರಾಟ್ ಕೊಹ್ಲಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡದೇ ಕಣಕ್ಕೆ ಇಳಿಯುವ ನಿರ್ಧಾರ ಕೈಗೊಂಡಿದ್ದರು. ಆದರೆ ರೋಹಿತ್ ಶರ್ಮಾ ಗೈರು ಹಾಜರಿಯಿಂದ ಅನಿವಾರ್ಯವಾಗಿ ಬದಲಾವಣೆ ಮಾಡಬೇಕಿದೆ. ಇತ್ತ ಏಕದಿನ ಕ್ರಿಕೆಟ್ ಸರಣಿಗೆ ರೋಹಿತ್ ಶರ್ಮಾ ತಂಡವನ್ನು ಸೇರಿಕೊಳ್ಳಲಿದ್ದಾರೆ.
Advertisement
ಈ ಹಿಂದೆ ಆರ್ ಅಶ್ವಿನ್ ಸಂಪೂರ್ಣವಾಗಿ ಚೇತರಿಸಿಕೊಳ್ಳದ ಕಾರಣ 4ನೇ ಟೆಸ್ಟ್ ಪಂದ್ಯದಿಂದಲೂ ಹೊರ ಉಳಿಯುವ ಸಾಧ್ಯತೆ ಬಗ್ಗೆ ಮಾಹಿತಿ ಲಭಿಸಿತ್ತು. ಸದ್ಯ ಜನವರಿ 3 ರಿಂದ ಆರಂಭವಾಗಲಿರುವ ಟೆಸ್ಟ್ ಪಂದ್ಯದ ಟಾಸ್‍ಗೂ ಮುನ್ನ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ. ಅಲ್ಲದೇ ಪಿಚ್ ಸ್ಪಿನ್ನರ್ ಗಳಿಗೆ ನೆರವಾಗಲಿರುವ ಕಾರಣ ಕುಲ್ದೀಪ್ ಯಾದವ್‍ಗೆ ಅಚ್ಚರಿ ಅವಕಾಶ ಲಭಿಸುತ್ತಾ ಅಥವಾ ಕೆ ಎಲ್ ರಾಹುಲ್ ಮತ್ತೊಂದು ಅವಕಾಶ ಪಡೆಯುತ್ತಾರ ಎನ್ನುವುದನ್ನು ಕಾದು ನೋಡಬೇಕಿದೆ.
ಟೀಂ ಇಂಡಿಯಾ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ರಹಾನೆ, ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಜಸ್‍ಪ್ರೀತ್ ಬುಮ್ರಾ, ಉಮೇಶ್ ಯಾದವ್.
India name 13-man squad for SCG Test: Virat Kohli (C), A Rahane (VC), KL Rahul, Mayank Agarwal, C Pujara, H Vihari, R Pant, R Jadeja, K Yadav, R Ashwin, M Shami, Jasprit Bumrah, Umesh Yadav
A decision on R Ashwin's availability will be taken on the morning of the Test #AUSvIND pic.twitter.com/4Lji2FExU8
— BCCI (@BCCI) January 2, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv