ರಾಜ್‌ಕೋಟ್: ಇದೇ ಫೆ.15ರಿಂದ ಇಂಗ್ಲೆಂಡ್ ವಿರುದ್ಧ ಇಲ್ಲಿ ನಡೆಯಲಿರುವ 3ನೇ ಟೆಸ್ಟ್ ಪಂದ್ಯದಿಂದ ಟೀಂ ಇಂಡಿಯಾ ಬ್ಯಾಟಿಂಗ್ ಪಿಲ್ಲರ್ ಕೆ.ಎಲ್ ರಾಹುಲ್ ಹೊರಗುಳಿದಿದ್ದಾರೆ. ಆದ್ರೆ ಕೆ.ಎಲ್ ರಾಹುಲ್ (KL Rahul) ಅವರ ಸ್ಥಾನಕ್ಕೆ ಬಿಸಿಸಿಐ (BCCI) ಮತ್ತೊಬ್ಬ ಕನ್ನಡಿಗನಿಗೆ ಮಣೆ ಹಾಕಿದೆ.
ಇಂಗ್ಲೆಂಡ್ ವಿರುದ್ಧದ 3ನೇ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲು ಕನ್ನಡಿಗ ಕೆ.ಎಲ್ ರಾಹುಲ್ ಹಾಗೂ ಆಲ್‌ರೌಂಡರ್ ರವೀಂದ್ರ ಜಡೇಜಾ (Ravindra Jadeja) ಅವರನ್ನು ಫಿಟ್‌ನೆಸ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಜಡೇಜಾ ಪಾಲ್ಗೊಳ್ಳುವಿಕೆಗೆ ಬಿಸಿಸಿಐ ಗ್ರೀನ್ ಸಿಗ್ನಲ್ ನೀಡಿದ್ದು, ಫಿಟ್‌ನೆಸ್ ಸಾಬೀತುಪಡಿಸುವಲ್ಲಿ ವಿಫಲರಾದ ಕೆ.ಎಲ್ ರಾಹುಲ್ ಅವರನ್ನು ಪಂದ್ಯದಿಂದ ಹೊರಗಿಡಲಾಗಿದೆ. ಅಲ್ಲದೇ ಕೆ.ಎಲ್ ರಾಹುಲ್ ಸ್ಥಾನಕ್ಕೆ ಮತ್ತೊಬ್ಬ ಕನ್ನಡಿಗನನ್ನೇ ಆದ ದೇವದತ್ ಪಡಿಕ್ಕಲ್ (Devdutt Padikkal) ಅವರಿಗೆ ಸ್ಥಾನ ನೀಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಟಗಾರರ ಪಟ್ಟಿ ಔಟ್ – ಟೂರ್ನಿಯಿಂದಲೇ ಹೊರಗುಳಿದ ಕೊಹ್ಲಿ
Advertisement
Advertisement
ಸದ್ಯ ವಿರಾಟ್ ಕೊಹ್ಲಿ (Virat Kohli) ಅವರ ಅನುಪಸ್ಥಿತಿಯಿಂದ ಟೀಂ ಇಂಡಿಯಾಕ್ಕೆ ಬ್ಯಾಟಿಂಗ್ ಬಲದ ಕೊರತೆಯಾಗಿದೆ. ಅನುಭವಿ ಅಗ್ರಕ್ರಮಾಂಕದಲ್ಲಿ ಕೊಹ್ಲಿ ಅವರ ಸ್ಥಾನ ತುಂಬಲು ಕೆ.ಎಲ್ ರಾಹುಲ್ ಅವರನ್ನು ತಂಡಕ್ಕೆ ಕರೆತರುವ ಉತ್ಸಾಹದಲ್ಲಿ ಬಿಸಿಸಿಐ ಇತ್ತು. ಆದ್ರೆ ಕೆ.ಎಲ್ ರಾಹುಲ್ ಅವರು ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ವೇಳೆ ಬಲತೋಡೆಯ ಸ್ನಾಯು ಸೆಳೆತದಿಂದ ಬಳಲುತ್ತಿದ್ದರು. ಸದ್ಯ ಕೆ.ಎಲ್ ರಾಹುಲ್ ಅವರು ಸಂಪೂರ್ಣ ಫಿಟ್ ಇರುವುದು ಕಂಡುಬಂದಿಲ್ಲ. ಹಾಗಾಗಿ ರಾಹುಲ್ ಅವರನ್ನು ಇನ್ನೂ ಒಂದು ವಾರಗಳ ಕಾಲ ಅವರನ್ನು ವೈದ್ಯಕೀಯ ಮೇಲ್ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಇದನ್ನೂ ಓದಿ: ರೋಹಿತ್, ಗಿಲ್ ಅಲ್ಲ; ಟೀಂ ಇಂಡಿಯಾದ ಈ ಆಟಗಾರ ಇಂಗ್ಲೆಂಡ್‌ಗೆ ಸಮಸ್ಯೆ – ಮೈಕೆಲ್ ವಾನ್
Advertisement
Advertisement
ಪಡಿಕಲ್‌ಗೆ ಚಾನ್ಸ್:
ಕೆ.ಎಲ್ ರಾಹುಲ್ ಬದಲಿಗೆ ಕರ್ನಾಟಕದ ಮತ್ತೊಬ್ಬ ಬ್ಯಾಟ್ಸ್‌ಮನ್ ದೇವದತ್ ಪಡಿಕ್ಕಲ್ ಅವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಲಾಗಿದೆ. ಸದ್ಯ ರಣಜಿ ಟ್ರೋಫಿಯಲ್ಲಿ ಆಡುತ್ತಿರುವ ದೇವದತ್ ಪಡಿಕಲ್ ಕರ್ನಾಟಕದ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಇತ್ತೀಚೆಗೆ ಪಂಜಾಬ್ ವಿರುದ್ಧ ನಡೆದ ಪಂದ್ಯದಲ್ಲಿ 193 ರನ್ ಗಳಿಸಿ ಮಿಂಚಿದ್ದರು. ಅಲ್ಲದೇ ಇಂಗ್ಲೆಂಡ್ ಲಯನ್ಸ್ ವಿರುದ್ಧ ನಡೆದ ಎರಡು ಟೆಸ್ಟ್ ಪಂದ್ಯದ ಮೂರು ಇನ್ನಿಂಗ್ಸ್‌ಗಳಲ್ಲಿ ಭಾರತ ಎ ತಂಡದ ಪರ ಕ್ರಮವಾಗಿ 105, 65 ಮತ್ತು 21 ರನ್ ಗಳಿಸಿದ್ದರು. ಇದನ್ನೂ ಓದಿ: ಮತ್ತೆ ಹೀನಾಯ ಸೋಲು, ಭಾರತದ ವಿಶ್ವಕಪ್ ಕನಸು ಭಗ್ನ – 14 ವರ್ಷಗಳ ಬಳಿಕ ಆಸೀಸ್‌ಗೆ U19 ವಿಶ್ವಕಪ್ ಕಿರೀಟ!