ಮುಂಬೈ: ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮ್ಯಾನ್ ಕನ್ನಡಿಗ ಕೆ.ಎಲ್ ರಾಹುಲ್‍ಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
Advertisement
ಗಾಯಗೊಂಡು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(NCA)ಯಲ್ಲಿ ಚೇತರಿಕೆ ಕಾಣುತ್ತಿರುವ ರಾಹುಲ್‍ಗೆ ಕೊರೊನಾ ಪಾಸಿಟಿವ್ ವರದಿಯಾಗಿರುವುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ. ಗಾಯಗೊಂಡ ಪರಿಣಾಮ ರಾಹುಲ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್, ಏಕದಿನ ಮತ್ತು ಟಿ20 ಸರಣಿಯಿಂದ ಹೊರಗುಳಿದಿದ್ದರು. ಇದನ್ನೂ ಓದಿ: ಕೌಂಟಿ ಕ್ರಿಕೆಟ್‍ನಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು
Advertisement
'West Indies is a great opportunity for the youngsters to get exposure and play, says #TeamIndia ODI Captain @SDhawan25 ahead of #WIvIND series. pic.twitter.com/PBelvII28c
— BCCI (@BCCI) July 21, 2022
Advertisement
ಆ ಬಳಿಕ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ರಾಹುಲ್ ಆಯ್ಕೆಯಾಗಿದ್ದರು. ಇನ್ನೇನು ತಂಡ ಕೂಡಿಕೊಳ್ಳಬೇಕೆನ್ನುವಷ್ಟರಲ್ಲಿ ಇದೀಗ ಕೊರೊನಾ ಸೋಂಕು ತಗುಲಿದೆ. ಇದರಿಂದಾಗಿ ರಾಹುಲ್ ವೆಸ್ಟ್ ಇಂಡೀಸ್ ಸರಣಿ ಆಡುವುದು ಅನುಮಾನವಾಗಿದೆ. ಇದನ್ನೂ ಓದಿ: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಆಯ್ಕೆ – ಕೊಹ್ಲಿಗಿಲ್ಲ ಸ್ಥಾನ, ರಾಹುಲ್‍ಗೆ ಷರತ್ತು!
Advertisement
ರಾಹುಲ್ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಆಯ್ಕೆಗೊಂಡಿದ್ದರೂ ಫಿಟ್ನೆಸ್ ಸಾಬೀತು ಪಡಿಸಬೇಕೆಂಬ ಷರತ್ತು ವಿಧಿಸಲಾಗಿತ್ತು. ರಾಹುಲ್ ಕೂಡ ಫಿಟ್ನೆಸ್ ಪರೀಕ್ಷೆಗೆ ತಯಾರಿಯಲ್ಲಿದ್ದರು. ಜುಲೈ 29 ರಿಂದ ಟಿ20 ಸರಣಿ ಆರಂಭವಾಗಲಿದೆ. ಈಗಾಗಲೇ ಶಿಖರ್ ಧವನ್ ನೇತೃತ್ವದ ತಂಡ ವೆಸ್ಟ್ ಇಂಡೀಸ್‍ನಲ್ಲಿ ಅಭ್ಯಾಸ ಆರಂಭಿಸಿದೆ.