ಹುಬ್ಬಳ್ಳಿ: ಪುಲ್ವಾಮಾ ದಾಳಿಗೆ ಒಂದು ವರ್ಷದ ಸಂದರ್ಭದಲ್ಲಿ ಆ ಕರಾಳ ದಿನದಂದು ಹುತಾತ್ಮರಾದ ಯೋಧರಿಗೆ ದೇಶಾದ್ಯಂತ ಗೌರವ ಸಮರ್ಪಣೆ ಮಾಡಲಾಗಿದೆ. ಆದರೆ ನಗರದ ಗೋಕುಲ ರಸ್ತೆಯಲ್ಲಿರುವ ಕೆಎಲ್ಇ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ವಿಡಿಯೋವೊಂದನ್ನು ಹರಿ ಬಿಟ್ಟಿದ್ದಾರೆ.
ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಿಕೆ ನೀಡಿ ವಿಡಿಯೋ ವೈರಲ್ ಮಾಡಿದವರು ಕಾಶ್ಮೀರ ಮೂಲದ ಮೂವರು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ.
Advertisement
Advertisement
ಸರ್ಕಾರಿ ಕೋಟಾದಲ್ಲಿ ಕಾಲೇಜಿಗೆ ದಾಖಲಾಗಿದ್ದ ಮೂವರು ಕಾಶ್ಮೀರ ವಿದ್ಯಾರ್ಥಿಗಳು ಸೆಲ್ಫಿ ವಿಡಿಯೋ ಮಾಡಿದ್ದು, ಅದರಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಅಮೀರ್, ಬಾಸೀತ್, ತಾಲೀಬ್ ವಿದ್ಯಾರ್ಥಿಗಳು ಈ ವಿಡಿಯೋ ಮಾಡಿದ್ದು, ಮೂವರು ಸಿವಿಲ್ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಾಗಿದ್ದಾರೆ.
Advertisement
Advertisement
ಮಾಹಿತಿ ತಿಳಿದು ಸ್ಥಳಕ್ಕೆ ಗೋಕುಲ ಠಾಣೆ ಪೊಲೀಸ್ ಅಧಿಕಾರಿಗಳ ಭೇಟಿ ನೀಡಿ, ಮೂವರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಕಾಲೇಜಿಗೆ ಭೇಟಿ ನೀಡಿದ ಭಜರಂಗದಳದ ಮುಖಂಡರು ಕೂಡಲೇ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹದ ಹಿನ್ನೆಲೆಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಲೇಜು ಪ್ರಾಂಶುಪಾಲರಾದ ಬಸವರಾಜ ಅನಾಮಿ, ಈ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದೇವೆ. ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.