ಮಡಿಕೇರಿ: ಭಾರತೀಯ ಜನತಾ ಪಾರ್ಟಿ ತನ್ನ ಹಿಂದೂ ಪರ ಧೋರಣೆ ಮತ್ತು ನಡೆಗಳ ಮೂಲಕ ಇಡೀ ‘ಹಿಂದೂ’ ಸಮೂಹವನ್ನು ಗುತ್ತಿಗೆ ಪಡೆದಂತೆ ವರ್ತಿಸುತ್ತಿದೆ. ನಾನು ಒಬ್ಬ ಹಿಂದೂವಾಗಿದ್ದರೂ ಬಿಜೆಪಿಯ ಇಂತಹ ಧೋರಣೆಗಳನ್ನು ವಿರೋಧಿಸುವುದಾಗಿ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಸ್ಪಷ್ಟಪಡಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದೂಗಳನ್ನು ಒಟ್ಟಾಗಿ ಗುತ್ತಿಗೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಪ್ರಸ್ತುತ ವ್ಯವಸ್ಥೆಯಡಿ ಬಿಜೆಪಿಯ ಧೋರಣೆಗಳನ್ನು ವಿರೋಧಿಸುವವರನ್ನು ದೇಶದ್ರೋಹಿಗಳೆಂದು ಬಿಂಬಿಸುವ ಪ್ರಯತ್ನಗಳು ನಡೆಯುತ್ತಿದ್ದು, ಇಂತಹ ಯಾವುದೇ ಪ್ರಯತ್ನಗಳಿಗೆ ಜೆಡಿಎಸ್ ಬಗ್ಗುವುದಿಲ್ಲ. ಜನರ ಹಕ್ಕುಗಳಿಗಾಗಿ ಹೋರಾಟವನ್ನು ನಡೆಸಿಯೇ ಸಿದ್ಧವೆಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ರಂಜಾನ್ ಸಮಯದಲ್ಲಿ ಮಧುಮೇಹ ನಿರ್ವಹಣೆ ಹೇಗೆ?
ಜನರ ಮೂಲಭೂತ ಸಮಸ್ಯೆಗಳನ್ನು ಬದಿಗಿರಿಸಿ ಹಿಜಬ್, ಹಲಾಲ್‍ನಂತಹ ವಿಚಾರಗಳನ್ನಷ್ಟೇ ಬಿಜೆಪಿ ಮುನ್ನೆಲೆಗೆ ತರುವ ಪ್ರಯತ್ನ ನಡೆಸುತ್ತಿದೆ. ಬಡವರ್ಗದ ನಿವೇಶನ ಸಮಸ್ಯೆ, ಮೂಲಭೂತ ಸೌಲಭ್ಯಗಳ ಕೊರತೆಗಳತ್ತ ಗಮನ ಹರಿಸುತ್ತಿಲ್ಲವೆಂದು ಟೀಕಿಸಿದ ಗಣೇಶ್, ಮುಂಬರುವ ದಿನಗಳಲ್ಲಿ ಕುಶಾಲನಗರದಿಂದ ಮಡಿಕೇರಿಗೆ ಬೃಹತ್ ಚಳುವಳಿ ಹಮ್ಮಿಕೊಂಡು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಕಷ್ಟದಲ್ಲಿರುವ ಜನರಿಗೆ ಸರ್ಕಾರದಿಂದ ಕರೆಂಟ್ ಶಾಕ್: ಪೃಥ್ವಿ ರೆಡ್ಡಿ