ಉಡುಪಿ: ಪೇಜಾವರಶ್ರೀ ಆರೋಗ್ಯ ಅತಿ ಮುಖ್ಯ. ಶ್ರೀಗಳು ಆಸ್ಪತ್ರೆಗೆ ದಾಖಲಾದ ದಿನದಿಂದ ನಿರಂತರವಾಗಿ ವಿಐಪಿಗಳು, ಗಣ್ಯರು ಬಂದು ಯೋಗಕ್ಷೇಮ ವಿಚಾರಿಸಲು ಬರುತ್ತಿದ್ದಾರೆ. ಸದ್ಯ ಶ್ರೀಗಳಿಗೆ ಯಾರು ಡಿಸ್ಟರ್ಬ್ ಮಾಡಬೇಡಿ ಎಂದು ಕೆಎಂಸಿ ಮಣಿಪಾಲ ಆಸ್ಪತ್ರೆ ವಿನಂತಿ ಮಾಡಿದೆ.
ವಿಐಪಿ, ಭಕ್ತರು ಆಸ್ಪತ್ರೆಗೆ ಬಾರದಿದ್ದರೆ ಒಳಿತು. ಗಣ್ಯರು ಬಂದಾಗೆಲ್ಲ ನಾವು ಐಸಿಯು ಬಾಗಿಲು ತೆರೆಯಬೇಕಾಗುತ್ತದೆ. ಇದರಿಂದ ವೈದ್ಯರ ಚಿಕಿತ್ಸೆಗೆ ಅಡ್ಡಿಯಾಗುತ್ತೆ. ಈ ಹಿಂದೆ ಕೂಡ ನಾನು ಮನವಿ ಮಾಡಿಕೊಂಡಿದ್ದೆ. ಈಗಲೂ ಮಾಡುತ್ತೇನೆ ಎಂದು ಡಾ. ಅವಿನಾಶ್ ಶೆಟ್ಟಿ ಹೇಳಿದರು.
Advertisement
Advertisement
ಪ್ರತಿನಿತ್ಯ ಹೆಲ್ತ್ ಬುಲೆಟಿನ್ ರಿಲೀಸ್ ಮಾಡುತ್ತೇವೆ. ಯಾರೂ ಆತಂಕಗೊಳ್ಳುವ ಅವಶ್ಯಕತೆಯಿಲ್ಲ. ಮಾಧ್ಯಮಗಳ ಮೂಲಕ ಮಾಹಿತಿ ಕಲೆ ಹಾಕಿಕೊಳ್ಳಬಹುದು ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ.
Advertisement
ಪೇಜಾವರ ಶ್ರೀ ತೀವ್ರ ಉಸಿರಾಟದಿಂದ ಕೆಎಂಸಿಗೆ ದಾಖಲಾಗಿದ್ದರು. ಪ್ರತಿ ಹಂತದಲ್ಲಿ ಮಾಹಿತಿ ನೀಡಿದ್ದೇವೆ. ಬೆಂಗಳೂರಿನಿಂದ ಇಬ್ಬರು ತಜ್ಞರು ಬಂದಿದ್ದಾರೆ. ಪೇಜಾವರ ಶ್ರೀಗಳ ಆರೋಗ್ಯ ಸಮಸ್ಥಿತಿಗೆ ತರುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಹೇಳಿದ್ದಾರೆ.
Advertisement
ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿರಂತರ ಸಂಪರ್ಕದಲ್ಲಿದ್ದಾರೆ. ಏಮ್ಸ್ ವೈದ್ಯರ ಜೊತೆಗೂ ನಿರಂತರ ಸಂಪರ್ಕದಲ್ಲಿ ಇದ್ದೇವೆ. ಚಿಕಿತ್ಸೆಯ ವಿವರ, ಅಲ್ಲಿನ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಹೇಳಿದರು.