ಬೆಂಗಳೂರು: ಭಾರೀ ಕುತೂಹಲ ಮೂಡಿಸಿದ್ದ ಕೆಎಂಎಫ್ ಚುನಾವಣೆಯನ್ನು ನೂತನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸರ್ಕಾರ ಏಕಾಏಕಿ ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. ಇದರಿಂದಾಗಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಭಾರೀ ಹಿನ್ನಡೆಯಾಗಿದೆ.
ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನವಾಣೆ ನಡೆಯಬೇಕಿತ್ತು. ಆದರೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಕಾಂಗ್ರೆಸ್‍ನ ನಾಲ್ಕು ಜನ ನಿರ್ದೇಶಕರನ್ನು ಹೈಜಾಕ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ರಾಜ್ಯ ಸರ್ಕಾರವು ಚುನಾವಣಾ ಆಯೋಗದ ಅಧಿಕಾರಿಗಳಿಂದ ಮಾಹಿತಿ ಪಡೆದು ಚುನವಾಣೆ ರದ್ದುಗೊಳಿಸಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಚುನಾವಣೆ ದಿನಾಂಕ ನಿಗದಿ ಮಾಡಲಾಗುತ್ತದೆ ಎಂದು ತಿಳಿಸಿದೆ.
Advertisement
Advertisement
ಈ ನಿರ್ಧಾರದಿಂದ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಗೆ ಭಾರೀ ಹಿನ್ನಡೆಯಾಗಿದ್ದು, ಕಾಂಗ್ರೆಸ್ ಶಾಸಕ, ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಭೀಮಾನಾಯ್ಕ್ ಅವರಿಗೆ ಖುಷಿ ಕೊಟ್ಟಿದೆ. ಆದರೆ ಮುಂದಿನ ದಿನಗಳಲ್ಲಿ ಬಿಜೆಪಿ ಕೆಎಂಎಫ್ ಮೇಲೆ ಹಿಡಿತ ಸಾಧಿಸುತ್ತಾ ಎಂಬ ಪ್ರಶ್ನೆ ಎದ್ದಿದೆ.
Advertisement
ಕೆಎಂಎಫ್ ಅಧ್ಯಕ್ಷ ಚುನಾವಣೆಯಲ್ಲಿ ಐವರು ಕಾಂಗ್ರೆಸ್ ಬೆಂಬಲಿತ, ಮೂವರು ಜೆಡಿಎಸ್, ಓರ್ವ ಬಿಜೆಪಿ ಹಾಗೂ ಮೂವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬೆಂಬಲಿತ ನಿರ್ದೇಶಕರಿದ್ದು ನಾಲ್ವರು ಸರ್ಕಾರದ ನಾಮನಿರ್ದೇಶಿತ ಸದಸ್ಯರಿದ್ದಾರೆ. ಎಚ್.ಡಿ.ರೇವಣ್ಣ ಅವರ ಬಳಿ 7 ನಿರ್ದೇಶಕರಿದ್ದರು. ಆದರೆ ಶಾಸಕ ಭೀಮಾನಾಯ್ಕ್ ಅವರ ಬೆಂಬಲಕ್ಕೆ ಕಾಂಗ್ರೆಸ್ಸಿನ ಐವರು ನಿರ್ದೇಶಕರು ಮಾತ್ರ ನಿಂತಿದ್ದರು.
Advertisement
ಇಂದು ಚುನಾವಣೆ ನಡೆದಿದ್ದರೆ ಬಹುತೇಕ ರೇವಣ್ಣ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತವಾಗಿತ್ತು. ಆದರೆ ಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಮಾಜಿ ಸಚಿವರಿಗೆ ಭಾರೀ ಹಿನ್ನಡೆಯಾಗಿದೆ. ಭಾನುವಾರ ರಾತ್ರಿ ಡಿಕೆ ಶಿವಕುಮಾರ್ ಭೇಟಿ ಬಳಿಕ ಮಾತಾನಾಡಿದ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್, ನಾಮಪತ್ರ ಸಲ್ಲಿಸಲು ನಮ್ಮ ನಾಯಕರು ಹೇಳಿದ್ದಾರೆ. ಹೈಜಾಕ್ ಆದವರು ವಾಪಸ್ ಬರ್ತಾರೆ. ಚುನಾವಣೆಯಲ್ಲಿ ಖಂಡಿತಾ ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.