ಬೆಂಗಳೂರು: ಬೆಲೆ ಏರಿಕೆಯಿಂದ ಈಗಾಗಲೇ ಜನ ರೋಸಿ ಹೋಗಿದ್ದಾರೆ. ಈ ನಡುವೆ ನಂದಿನ ಹಾಲಿನ ದರವನ್ನು 3 ರೂ.ಗೆ ಹೆಚ್ಚಳ ಮಾಡಲು ಕೆಎಂಎಫ್ ನಿರ್ಧರಿಸಿದೆ.
Advertisement
ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿಂದ ಕೆಎಂಎಫ್ ವತಿಯಿಂದ ಸರ್ಕಾರಕ್ಕೆ ಮನವಿ ಮಾಡಿಲಾಗಿದೆ ಹೀಗಿದ್ದರೂ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ಕ್ರಮಕೈಗೊಂಡಿಲ್ಲ. ರೈತರು ಹಾಗೂ ಕೆಎಂಎಫ್‍ನ ಜಿಲ್ಲಾ ಹಾಲು ಒಕ್ಕೂಡಗಳಿಂದ ಹಾಲಿನ ದರ ಹೆಚ್ಚಳಕ್ಕೆ ಒತ್ತಡ ಹೆಚ್ಚಾಗಿದೆ. ಹೀಗಾಗಿ ಕೆಎಂಎಫ್ ತನಗೆ ಇರುವ ಅಧಿಕಾರವನ್ನು ಬಳಸಿಕೊಂಡು ತಾನೇ ಹಾಲಿನ ದರವನ್ನು ಏರಿಸಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಬ್ರಿಟನ್ ರಾಣಿಯ ಕಿರೀಟದಲ್ಲಿದ್ದ ಕೊಹಿನೂರು ವಜ್ರದ ಮೂಲ ಯಾದಗಿರಿ!
Advertisement
Advertisement
ಈ ಕುರಿತಂತೆ ನಗರದ ಖಾಸಗಿ ಹೋಟೆಲ್‍ನಲ್ಲಿ ಶುಕ್ರವಾರ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೆಎಂಎಫ್ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸರ್ವಾನುಮತದ ನಿರ್ಣಯ ಕೈಗೊಂಡಿದ್ದು, ಕೆಎಂಎಫ್‍ನ ಎಲ್ಲ 14 ಜಿಲ್ಲಾ ಹಾಲು ಒಕ್ಕೂಟಗಳು ಹಾಲಿನ ದರ ಹೆಚ್ಚಳ ಮಾಡುವುದಕ್ಕೆ ಬೆಂಬಲ ನೀಡಿದೆ. ನಂದಿನಿ ಹಾಲಿನ ದರವನ್ನು ಮೂರು ರೂಪಾಯಿ ಹೆಚ್ಚಳ ಮಾಡಲಿದ್ದು, ಇದನ್ನು ಹಾಲು ಉತ್ಪಾದಕ ರೈತರಿಗೆ ವರ್ಗಾಯಿಸಲಾಗುವುದು ಎಂದು ಹೇಳಲಾಗಿದೆ. ಇದನ್ನೂ ಓದಿ: ನಾನೂ ಸಿದ್ದರಾಮಯ್ಯರನ್ನ ಕಚ್ಚೆ ಹರುಕ ಅನ್ನಬಹುದಲ್ವಾ?: ಸಿಟಿ ರವಿ