ಬೆಂಗಳೂರು: ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಅಧಿಪತ್ಯದ ಹಾಸನ ಹಾಲು ಒಕ್ಕೂಟವನ್ನು ಬೇರ್ಪಡಿಸಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿದೆ.
ಎಚ್.ಡಿ.ರೇವಣ್ಣ ಅವರಿಗೆ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ತಪ್ಪಿಸಲೆಂದೇ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರವು ಹಾಸನದಿಂದ ಚಿಕ್ಕಮಗಳೂರನ್ನು ಬೇರ್ಪಡಿಸಲು ಮುಂದಾಗಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಚಿಕ್ಕಮಗಳೂರು ಹಾಲು ಒಕ್ಕೂಟ ರಚಿಸಲು ಸಿಎಂ ಯಡಿಯೂರಪ್ಪ ಒಪ್ಪಿಗೆ ಕೂಡ ನೀಡಿದ್ದಾರೆ. ಇದನ್ನೂ ಓದಿ: ರೇವಣ್ಣಗೆ ತಿರುಗಿದ ಬಾಣ: ‘ಕಮಲ’ದಿಂದ ‘ಕೈ-ತೆನೆ’ ಬೆಂಬಲಿತ ನಿರ್ದೇಶಕರು ಹೈಜಾಕ್!
ತಕ್ಷಣ ಹಾಸನ ಒಕ್ಕೂಟದಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡು ಚಿಕ್ಕಮಗಳೂರು ಪ್ರತ್ಯೇಕ ಹಾಲು ಒಕ್ಕೂಟ ರಚನೆಗೆ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚಿಸಿದ್ದಾರೆ ಎಂದು ಸಚಿವ ಸಿಟಿ ರವಿ ತಿಳಿಸಿದ್ದಾರೆ. ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಚುನಾವಣೆ ನಡೆಯಲಿದೆ. ಆದರೆ ಬಾಲಚಂದ್ರ ಜಾರಕಿಹೊಳಿ ಅವರನ್ನು ಅಧ್ಯಕ್ಷರನ್ನಾಗಿಸಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿದೆ. ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ನಿರ್ದೇಶಕರನ್ನು ಮುಂಬೈನ ಹೋಟೆಲ್‍ನಲ್ಲಿ ಬಿಜೆಪಿ ಇರಿಸಿದೆ.


