DistrictsKalaburagiKarnatakaLatestLeading NewsMain Post

ನ.20ರ ನಂತರ ಹಾಲಿನ ಬೆಲೆ ಏರಿಕೆ ನಿರ್ಧಾರ: ಸಿಎಂ ಬೊಮ್ಮಾಯಿ

ಕಲಬುರಗಿ: ನಂದಿನಿ ಹಾಲು ಮತ್ತು ಮೊಸರಿನ(Milk and Curd) ದರ ಏರಿಕೆಯ ಬಗ್ಗೆ ನ.20ರ ನಂತರ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ.

ಹಾಲಿನ ದರ 3 ರೂಪಾಯಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನ.20 ರ ನಂತರ ಹಾಲು ಒಕ್ಕೂಟದ ಮಹಾಮಂಡಳ ಅಧ್ಯಕ್ಷರು ಮತ್ತು ಅಧಿಕಾರಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಲಾಗುತ್ತದೆ. ಜನರಿಗೆ ಭಾರ ಆಗದಂತೆ, ರೈತರಿಗೆ ಅನುಕೂಲವಾಗುವಂತೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಇಂದು ಮಧ್ಯರಾತ್ರಿಯಿಂದಲೇ ಪ್ರತಿ ಲೀಟರ್‌ ನಂದಿನಿ ಹಾಲು ಮತ್ತು ಮೊಸರಿನ ದರ 3 ರೂ. ಏರಿಕೆ ಮಾಡಲು ಕೆಎಂಎಫ್‌ ಮುಂದಾಗಿತ್ತು.  ಇದನ್ನೂ ಓದಿ: ದೆಹಲಿಯ ಭಯಾನಕ ಕೃತ್ಯಕ್ಕೆ ಅಮೆರಿಕದ ಥ್ರಿಲ್ಲರ್ `ಡೆಕ್ಸ್ಟರ್‌’ ಸ್ಫೂರ್ತಿ – ರೋಚಕ ಸತ್ಯ ಬಯಲು

ಸದ್ಯ ರೈತರಿಂದ ಪ್ರತಿ ಲೀಟರ್ ಹಾಲನ್ನು ಕೆಎಂಎಫ್‌(KMF) ಸರಾಸರಿ 29 ರೂ.ಗೆ ಖರೀದಿ ಮಾಡುತ್ತಿತ್ತು. ಅಷ್ಟೇ ಅಲ್ಲದೇ ಸರ್ಕಾರದಿಂದ‌ ಪ್ರತಿ ಲೀಟರ್‌ಗೆ 5 ರೂ. ಸಹಾಯಧನ ಕೂಡ ರೈತರಿಗೆ ನೀಡಲಾಗುತ್ತಿದೆ. ಈಗ ಏರಿಕೆ ಮಾಡಿದ ಹಣವನ್ನು ರೈತರಿಗೆ ನೀಡುವ ಪ್ಲ್ಯಾನ್‌ ಮಾಡಲಾಗಿದೆ.

ಹವಾಮಾನ ವೈಪರೀತ್ಯ ಕಾರಣದಿಂದ ಮೇವು ಸಿಗುತ್ತಿಲ್ಲ. ಮೇವಿನ ಬೆಲೆ ಭಾರೀ ಏರಿಕೆಯಾಗಿದೆ. ಇದರ ಜೊತೆ ಹಸುವಿಗೆ ಚರ್ಮ ಗಂಟು ರೋಗ ಬಾಧಿಸುತ್ತಿದೆ. ಅಷ್ಟೇ ಅಲ್ಲದೇ ಸಾಗಾಣಿಕೆ, ವಿದ್ಯುತ್, ಪ್ಯಾಕಿಂಗ್ ಇತ್ಯಾದಿ ವೆಚ್ಚ ಶೇ.25 – 35 ರಷ್ಟು ಹೆಚ್ಚಳವಾಗಿದೆ. ಈ ಕಾರಣಕ್ಕೆ ಹಾಲು ಮತ್ತು ಮೊಸರಿನ ಬೆಲೆಯನ್ನು ಏರಿಕೆ ಮಾಡಲು ಕೆಎಂಎಫ್‌ ಮುಂದಾಗಿತ್ತು.

Live Tv

Leave a Reply

Your email address will not be published. Required fields are marked *

Back to top button