DistrictsKarnatakaLatestLeading NewsMain PostTumakuru

ದೇವೇಗೌಡ್ರು ಇಬ್ಬರ ಮೇಲೆ ಕೈ ಹಾಕ್ಕೊಂಡು ಹೋಗ್ತಾವ್ರೆ… ನಾಲ್ವರ ಮೇಲೆ ಹೋಗೋದು ಹತ್ತಿರದಲ್ಲೇ ಇದೆ: KN ರಾಜಣ್ಣ

Advertisements

ತುಮಕೂರು: ಹೆಚ್.ಡಿ.ದೇವೇಗೌಡರು ಇಬ್ಬರ ಮೇಲೆ ಕೈ ಹಾಕ್ಕೊಂಡು ಹೋಗ್ತಾವ್ರೆ. ನಾಲ್ವರ ಮೇಲೆ ಹೋಗೋದು ಹತ್ತಿರದಲ್ಲೇ ಇದೇ ಎಂದು ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ವಿವಾದಾತ್ಮ ಹೇಳಿಕೆ ನೀಡಿದ್ದಾರೆ.

ಇಲ್ಲಿನ ಮಧುಗಿರಿ ತಾಲ್ಲೂಕಿನ ಕಾವಣದಾಲ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನನಗೆ ಆಗಲೇ 72 ವರ್ಷ, 77 ಆದ್ರೆ ಕೈಕಾಲು ಅಲಾಡ್ತಿರುತ್ತೆ. ಸರ್ಕಾರ ಬಂದ್ರೇ ನೂರಕ್ಕೆ ನೂರರಷ್ಟು ಮಂತ್ರಿ ಆಗ್ತೀನಿ. ದೇವೇಗೌಡರು ಇಬ್ಬರ ಮೇಲೆ ಕೈ ಹಾಕ್ಕೊಂಡು ಹೋಗ್ತಾವ್ರೆ. ನಾಲ್ವರ ಮೇಲೆ ಹೋಗೋದು ಹತ್ತಿರದಲ್ಲೇ ಇದೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ರೋಹಿತ್ ಶರ್ಮಾ ಔಟ್ ಆಗ್ತಿದ್ದಂತೆ 4ನೇ ಕ್ರಮಾಂಕದಲ್ಲಿ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ‘ಜಾರ್ವೋ’!

ಇದು ನನ್ನ ಕೊನೆಯ ಚುನಾವಣೆ. ಶೋಕಿಗೆ, ಮುಖ ಸ್ಥುತಿಗೆ ರಾಜಕಾರಣ ಮಾಡೋದು ಬೇಡ. ನಾನು ಎಂಎಲ್‌ಎ ಆದ್ರೇ ನೀವೆಲ್ಲಾ ಎಂಎಲ್‌ಎಗಳು ಇದ್ದಂಗೆ. ನೀವು ಹೋರಾಟ ಮಾಡಿ ನಾನು ಎಂಎಲ್‌ಎ ಆದ್ರೇ, ನಾನು ಸುಮ್ಮನೆ ನಾಮಕಾವಸ್ಥೆಗೆ ಇರ್ತೀನಿ ಎಂದು ಹೇಳಿದ್ದಾರೆ.

ನಾನು ಎಂಎಲ್‌ಎ ಆದ್ರೆ ಏನಾದ್ರೂ ಕೆಲಸ ಆಗಬೇಕಿದ್ದರೆ ನೀವೇ ಅಧಿಕಾರಿಗಳನ್ನ ಕೇಳೋ ಶಕ್ತಿ ನಿಮಗೆ ಬರುತ್ತೆ. ಮುಂದಿನ ದಿನಗಳಲ್ಲಿ ಪ್ರತಿ ಮನೆ ಬಾಗಿಲಿಗೂ ಬಂದು ಓಟ್ ಕೇಳ್ತೀನಿ. ಇದು ನನ್ನ ಕೊನೆಯ ಚುನಾವಣೆ ಮುಂದೆ ನೀವು ನಿಂತ್ಕೋ ಅಂದ್ರೂ ನಿಲ್ಲೋದಿಲ್ಲ ಎಂದು ತಿಳಿಸಿದ್ದಾರೆ.

Live Tv

Leave a Reply

Your email address will not be published.

Back to top button